More

    ದೈವಿಕ ಆಶೀರ್ವಾದದಿಂದ ಮಾನವ ಜನ್ಮ ಲಭ್ಯ

    ಗುಂಡ್ಲುಪೇಟೆ: ಮಾನವ ಜನ್ಮ ಅತ್ಯಂತ ಶ್ರೇಷ್ಠವಾಗಿದ್ದು, ದೈವಿಕ ಆಶೀರ್ವಾದದಿಂದ ಮಾತ್ರ ಇದು ದೊರಕುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

    ತಾಲೂಕಿನ ಆಲತ್ತೂರು ಗ್ರಾಮದಲ್ಲಿ ಸೋಮವಾರ ನೂತನವಾಗಿ ನಿರ್ಮಿಸಿದ ಹಾಗೂ ಜೀರ್ಣೋದ್ಧರಗೊಳಿಸಿದ ಮಂಟೇಸ್ವಾಮಿ, ಸಿದ್ದಪ್ಪಾಜಿ, ಕಾಲಭೈರವೇಶ್ವರ, ಕಾಳಿಕಾಂಭಾ ಹಾಗೂ ವೇಣುಗೋಪಾಲಸ್ವಾಮಿ ದೇವಾಲಯಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿ ಊರುಗಳಲ್ಲಿಯೂ ಇರುವ ದೇವಾಲಯಗಳು ಗ್ರಾಮದ ಎಲ್ಲ ಜನರ ಒಗ್ಗೂಡುವಿಕೆಗೆ ನೆರವಾಗುತ್ತಿವೆ. ಭಗವಂತನ ಕೃಪೆಯಿದ್ದರೆ ಮಾತ್ರ ಸಕಲ ಜೀವರಾಶಿಗಳ ಸೃಷ್ಠಿಗೆ ಸಾಧ್ಯವಾಗುತ್ತದೆ. ಪ್ರತಿಯೊಬ್ಬರೂ ಸನ್ನಡತೆಯಿಂದ ಬದುಕಿ ಸಾಧನೆಗೈಯ್ಯುವಂತಾಗಬೇಕು ಎಂದು ಸಲಹೆ ನೀಡಿದರು.

    ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಮಾತನಾಡಿ, ಅಯೋಧ್ಯಯಲ್ಲಿ 500 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಮಮಂದಿರ ನಿರ್ಮಾಣ ಐತಿಹಾಸಿಕ ಬೆಳವಣಿಗೆಯಾಗಿದೆ. ತಾಲೂಕಿನ ಎಲ್ಲ ಗ್ರಾಮಗಳಲ್ಲಿಯೂ ಧಾರ್ಮಿಕ ಒಲವು ಹೆಚ್ಚಾಗಿದ್ದು, ಗುರುಗಳ ಆಶೀರ್ವಾದದಿಂದ ಶಿಥಿಲವಾಗಿದ್ದ ಹಳೆಯ ದೇವಾಲಯಗಳ ಜೀರ್ಣೋದ್ಧಾರ ಮಾಡುವ ಮೂಲಕ ತಮ್ಮ ಭಕ್ತಿಭಾವ ಮೆರೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಎಚ್.ಎಸ್.ಕೃಷ್ಣ, ಚುಂಚಶ್ರೀ ಪ್ರಶಸ್ತಿ ವಿಜೇತ ಶಿವಣ್ಣ, ವಾಗ್ಮಿ ಪ್ರೊ.ಕೃಷ್ಣೇಗೌಡ, ಅಬಕಾರಿ ಜಂಟಿ ಆಯುಕ್ತ ಎ.ಎಲ್. ನಾಗೇಶ್, ಐಆರ್‌ಎಸ್ ನಾರಣಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹಂಗಳ ಪಟ್ಟದ ಮಠದ ಷಡಕ್ಷರ ಸ್ವಾಮೀಜಿ, ಮಾದಾಪಟ್ಟಣ ಮಠದ ತೋಂಟದಾರ್ಯ ಸ್ವಾಮೀಜಿ, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಆಲತ್ತೂರು ಜಯರಾಂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts