ಕ್ರೀಡೆಯಲ್ಲಿ ಪಾಲ್ಗೊಂಡರೆ ಒತ್ತಡ, ಆಲಸ್ಯ ನಿವಾರಣೆ...

Kreede 1
Published on

ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಅಭಿಪ್ರಾಯ

ಅಜ್ಜರಕಾಡು ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ವ್ಯಾಯಾಮದೊಂದಿಗೆ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ. ಮಾನಸಿಕ ಖಿನ್ನತೆ, ಒತ್ತಡ ಮತ್ತು ಆಲಸ್ಯದಿಂದ ಹೊರಬರಲು ಕ್ರೀಡಾಕೂಟಗಳು ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಅಭಿಪ್ರಾಯಪಟ್ಟರು.

Kreede 2
ಉಡುಪಿಯ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಾ.26ರಂದು ಆಯೋಜಿಸಿದ್ದ ಅಜ್ಜರಕಾಡು ಡಾ. ಜಿ.ಶಂಕರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಉಡುಪಿಯ ಸಾಫಲ್ಯ ಟ್ರಸ್ಟ್​ನ ಅಧ್ಯೆ ಹರಿಣಾ ರಮೇಶ ಮಾತನಾಡಿ, ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರಪ್ರಸಾದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Kreede 3
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನಾ, ಐಕ್ಯುಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ವಾಣಿಜ್ಯ ನಿಕಾಯದ ಡೀನ್​ ಗೌರಿ ಎಸ್​. ಭಟ್​, ಉಡುಪಿಯ ಸಾಫಲ್ಯ ಟ್ರಸ್ಟ್​ನ ನಿರ್ದೇಶಕಿ ನಿರುಪಮಾ ಪ್ರಸಾದ ಉಪಸ್ಥಿತರಿದ್ದರು.
Kreede 4
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್​ ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಜೇಂದ್ರ ಕೆ. ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ವಂದಿಸಿದರು.

ಕ್ರೀಡಾಕೂಟದಲ್ಲಿ ಪಾಲ್ಗೊಂಡ ಎಲ್ಲ ವಿದ್ಯಾರ್ಥಿನಿಯರಿಗೆ ಕ್ರೀಡಾಕೂಟದ ನಿಯಮದಂತೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net