ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಸೇವೆ ಸುತ್ಯರ್ಹ: ಸೋಮಣ್ಣ ಬೇವಿನಮರದ ಹೇಳಿಕೆ

New Project (39)
Published on

ಬದಿಯಡ್ಕ: ಗಡಿಪ್ರದೇಶದ ಕನ್ನಡ ಭಾಷೆ, ಸಂಸ್ಕೃತಿಗಳ ಬೆಳವಣಿಗೆ, ಇಲ್ಲಿಯ ಕನ್ನಡಿಗರ ಆಶೋತ್ತರಗಳ ಬಗ್ಗೆ ಕರ್ನಾಟಕ ಸರ್ಕಾರ ಸದಾ ಕಟಿಬದ್ಧವಾಗಿದೆ. ಶತಮಾನಗಳನ್ನು ಪೂರೈಸಿರುವ ಮಹಾಜನ ವಿದ್ಯಾಸಂಸ್ಥೆ ಕನ್ನಡ ಮಾಧ್ಯಮ ಶಿಕ್ಷಣ ನೀಡುವಲ್ಲಿ ಅಹರ್ನಿಶಿ ಸಲ್ಲಿಸುತ್ತಿರುವ ಸೇವೆ ಸುತ್ಯರ್ಹವಾದುದು ಎಂದು ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ 2022-23ನೇ ಸಾಲಿನಲ್ಲಿ 40 ಲಕ್ಷ ರೂ. ಅನುದಾನದಲ್ಲಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು-ಹೈಸ್ಕೂಲಿನಲ್ಲಿ ಬುಧವಾರ ಸಾಂಸ್ಕೃತಿಕ ಭವನ ಉದ್ಘಾಟಿಸಿ ಮಾತನಾಡಿದರು.

ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಶಾಲಾ ಪ್ರಬಂಧಕ ಜಯದೇವ ಖಂಡಿಗೆ, ಕನ್ನಡ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಅಖಿಲೇಶ್ ನಗುಮುಗಂ, ನಿವೃತ್ತ ಪ್ರಾಧ್ಯಾಪಕ ಪ್ರೊ.ಎ.ಶ್ರೀನಾಥ್, ಮುಖ್ಯ ಶಿಕ್ಷಕ ಶಿವಪ್ರಕಾಶ್ ಎಂ.ಕೆ., ಮಾಲತಿ, ಪ್ರಾಂಶುಪಾಲ ಸುಬ್ರಹ್ಮಣ್ಯ, ಶಿಕ್ಷಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net