ಪರಿಶ್ರಮದಿಂದ ಯಶಸ್ಸು, ಸಂತೋಷ : ಮಂಜುನಾಥ ಗೌಡ ಎಸ್.ಆರ್. ಅಭಿಪ್ರಾಯ

New Project (2)
Published on

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ಯಾವುದೇ ಕೆಲಸವನ್ನು ಶ್ರಮವಹಿಸಿ ಮಾಡಿದಾಗ ಅದರ ಯಶಸ್ಸಿನಲ್ಲಿ ಸಂತೋಷ ಸಿಗುತ್ತದೆ ಎಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಆಡಳಿತ ಅಧ್ಯಕ್ಷ ಮಂಜುನಾಥ ಗೌಡ ಎಸ್.ಆರ್. ಹೇಳಿದರು.

ಬಂಟ್ವಾಳ ತಾಲೂಕು ಕೃಷಿಕ ಸಮಾಜ ವತಿಯಿಂದ ಬಿ.ಸಿ.ರೋಡಿನಲ್ಲಿ ನಿರ್ಮಾಣಗೊಂಡಿರುವ ಕೃಷಿಕ ಸಮಾಜ ಭವನ ಉದ್ಘಾಟಿಸಿ, ಬಳಿಕ ಬಿ.ಸಿ.ರೋಡಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಮುಖ್ಯ ಅತಿಥಿಯಾಗಿದ್ದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿದರು. ಬಂಟ್ವಾಳ ಕೃಷಿಕ ಸಮಾಜದ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಭತ್ತದ ಬೆಳೆ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಬಹುಮಾನ ಪಡೆದ ಲೀಲಾ ಅಣ್ಣು ಗೌಡ ಹಾಗೂ ಡಾಲಿ ವಿ.ಜೆ. ಅವರನ್ನು ಸನ್ಮಾನಿಸಲಾಯಿತು. ಫಲಾನುಭವಿಗಳಿಗೆ ಕೃಷಿ ಯಂತ್ರ ಹಸ್ತಾಂತರಿಸಲಾಯಿತು. ಕೃಷಿ ಸಖಿ ಮತ್ತು ಪಶು ಸಖಿಗಳನ್ನು ಗೌರವಿಸಲಾಯಿತು. ರಾಜ್ಯ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ಪುರಸಭಾಧ್ಯಕ್ಷ ವಾಸು ಪೂಜಾರಿ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಕೃಷಿಕ ಸಮಾಜ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ರೈ, ಜಿಲ್ಲಾ ಉಪಾಧ್ಯಕ್ಷ ಚಂದ್ರ ಕೋಳ್ಚಾರ್, ಜಿಪಂ ಮಾಜಿ ಸದಸ್ಯ ಪದ್ಮಶೇಖರ್ ಜೈನ್, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ ಕೆ.ಆರ್., ಹಿರಿಯ ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಎಂಆರ್‌ಪಿಎಲ್ ಅಧಿಕಾರಿ ಕೃಷ್ಣ ಹೆಗ್ಡೆ ಉಪಸ್ಥಿತರಿದ್ದರು.

ಕಟ್ಟಡ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಉಮ್ಮರ್ ಬಿ. ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು. ಕೃಷಿ ಅಧಿಕಾರಿ ನಂದನ್ ಶೆಣೈ ಸಹಕರಿಸಿದರು.

ಬಂಟ್ವಾಳ ತಾಲೂಕಿನಲ್ಲಿ ಉತ್ತಮವಾದ ಕಟ್ಟಡ ನಿರ್ಮಾಣಗೊಂಡಿದೆ. ಬಡ್ಡಿ ರಹಿತ ಸಾಲದ ಬೇಡಿಕೆಯನ್ನು ಬಂಟ್ವಾಳ ಕೃಷಿಕ ಸಮಾಜ ಮುಂದಿಟ್ಟಿದ್ದು ಸೂಕ್ಷ್ಮವಾಗಿ ಅವಲೋಕಿಸಿ ಸಹಕಾರ ನೀಡಲಾಗುವುದು. ಈ ಕಟ್ಟಡದ ಮೂಲಕ ಬರುವ ಆದಾಯದಲ್ಲಿ ರೈತರ ಅಭಿವೃದ್ಧಿಗೆ ಪೂರಕವಾಗುವ ಚಟುವಟಿಕೆಗಳನ್ನು ಮಾಡಿ. ಮಂಜುನಾಥ ಗೌಡ ಎಸ್.ಆರ್. ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಆಡಳಿತ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net