

ಜನ್ನಾಡಿ: ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಅವರಿಂದ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಜ.10ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ‘ಅರಿವಿನ ಬೆಳಕು-ಉಪನ್ಯಾಸ ಮಾಲೆ’ ಕಾರ್ಯಕ್ರಮ ನೆರವೇರಿಸಲಾಯಿತು.
ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಕಾಕ್ರಮ ಉದ್ಘಾಟಿಸಿದರು. ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು.
ಕಾಲೇಜು ವಿದ್ಯಾರ್ಥಿನಿಯರಿಂದ ಪ್ರಾರ್ಥನೆ ನಡೆಸಲಾಯಿತು. ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್ ಸದಸ್ಯ, ಸಂಚಾಲಕ ಡಾ.ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಡಾ.ಭಾರತಿ ಮರವಂತೆ ಪ್ರಾಸ್ತಾವಿಕ ಮಾತನಾಡಿದರು. ಕೋಟೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಡಾ.ಸುಧಾಕರ ದೇವಾಡಿಗ ಬಿ ಅವರು ‘ಶಿವರಾಮ ಕಾರಂತರ ಬರಹಗಳು : ವೈಚಾರಿಕ ಪ್ರಜ್ಞೆ’ ಕುರಿತು ಉಪನ್ಯಾಸ ನೀಡಿದರು.
ಕನ್ನಡ ಉಪನ್ಯಾಸಕಿ ಜ್ಯೋತಿ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳ ಪರಿಚಯಿಸಿದರು. ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಶ್ರೀ ಶಂಕರ ನಾಯ್ಕ ವಂದಿಸಿದರು. ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಉದಯ ಕುಮಾರ ಶೆಟ್ಟಿ ಕಾಳಾವರ ಕಾರ್ಯಕ್ರಮ ನಿರೂಪಿಸಿದರು. ಡಾ.ಶಿವರಾಮ ಕಾರಂತ ಟ್ರಸ್ಟ್ ಸದಸ್ಯರಾದ ಸತೀಶ್ ಕೊಡವೂರು, ಡಾ.ಪ್ರಸಾದ್ ರಾವ್, ಜಿ.ಎಂ.ಶರೀಫ್ ಹೂಡೆ ಉಪಸ್ಥಿತರಿದ್ದರು.