More

  ಜೂ.30ಕ್ಕೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ!

  ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ (ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭ ಇದೇ ಜೂನ್ 30ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಎಂದು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ತಿಳಿಸಿದರು.

  ಇದನ್ನೂ ಓದಿ: ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ ರಾಹುಲ್ ಗಾಂಧಿ!

  ಈ ಕುರಿತು ಮಾಹಿತಿ ನೀಡಲು ನಗರದ ನಿರ್ಮಾಪಕರ ಸಂಘದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿ ಮಾತನಾಡಿದ ಅವರು, ‘ಹಲವು ಜನರ ಶ್ರಮದಿಂದ ಇಂದು ನಿರ್ಮಾಪಕರ ಸಂಘದ ಹೊಸ ಕಟ್ಟಡ ನಿರ್ಮಾಣವಾಗಿದೆ. ಅಲ್ಲದೇ, ಉದ್ಘಾಟನೆ ಆಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಮ್ಮ ಸಂಘದ ಹೊಸ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ’ ಎಂದು ಉಮೇಶ್​ ಬಣಕಾರ್​ ಹೇಳಿದ್ದಾರೆ.

  ಉದ್ಘಾಟನಾ ಸಮಾರಂಭದಲ್ಲಿ ‘ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿ’ ಸದಸ್ಯರು, ‘ಫಿಲ್ಮ್​ ಫೆಡರೇಷನ್‌ ಆಫ್‌ ಇಂಡಿಯಾ’ ಪದಾಧಿಕಾರಿಗಳು, ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ ಸದಸ್ಯರು ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದ್ದಾರೆ ಉಮೇಶ್ ಬಣಕಾರ್​. ಈ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕರ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್, ರಮೇಶ್‍ ಯಾದವ್‍, ಎಂ.ಜಿ. ರಾಮಮೂರ್ತಿ, ಆರ್.ಎಸ್. ಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

  ಹೊಂಬಾಳೆ ಫಿಲಂಸ್‍, ಆರ್‌.ಎಸ್‌. ಗೌಡ, ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಈ ನೂತನ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ನಿರ್ಮಾಪಕ ರಮೇಶ್‌ ರೆಡ್ಡಿ ಕಟ್ಟಡ ನಿರ್ಮಾಣ ಜವಾಬ್ದಾರಿ ಹೊತ್ತು ನೆರವಾಗಿದ್ದಾರೆ. ದಕ್ಷಿಣ ಭಾರತದಲ್ಲಿ ನಿರ್ಮಾಪಕರಿಗೆ ಎಂದೇ ಸ್ವಂತ ಕಟ್ಟಡ ಹೊಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಸಾರಾ ಗೋವಿಂದು ತಿಳಿಸಿದರು.

  ಮಾತಾ ವೈಷ್ಣೋದೇವಿ ದರ್ಶನಕ್ಕೆ ಜಮ್ಮುವಿನಿಂದ ನೇರ ಹೆಲಿಕಾಪ್ಟರ್ ಸೇವೆ ಆರಂಭ

  See also  ಐಪಿಎಲ್​ 16ನೇ ಆವೃತ್ತಿಯಿಂದ ಹರಿದುಬಂದ ಆದಾಯವೆಷ್ಟು? ಇಲ್ಲಿದೆ ಮಾಹಿತಿ…

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts