

ಕಾಸರಗೋಡು: ವರ್ಕಾಡಿ ಕೊಡ್ಲಮೊಗರು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವೆಂಡಿಂಗ್ ಮಷಿನ್ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ವರ್ಕಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್. ಸಮಾರಂಭ ಉದ್ಘಾಟಿಸಿದರು.
ಗ್ರಾಮ ಪಂಚಾಯಿತಿ ಸದಸ್ಯೆ ಆಶಾಲತಾ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್, ಪ್ರಾಂಶುಪಾಲ ವಿಜಯ ಕುಮಾರ್, ಉಪಾಧ್ಯಕ್ಷ ಮೋಹನ್ ಮತ್ತು ಸಹಾಯಕ ಕಾರ್ಯದರ್ಶಿ ಮಧುಕುಮಾರ್, ಆರೋಗ್ಯ ನಿರೀಕ್ಷಕಿ ಜಾಸ್ಮೀನ್ ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಕೃಷ್ಣವೇಣಿ ಸ್ವಾಗತಿಸಿದರು. ವನಿತಾ ಕಾರ್ಯಕ್ರಮ ನಿರೂಪಿಸಿದರು. ಸ್ಮಿತಾ ವಂದಿಸಿದರು.