

ಬೆಳ್ತಂಗಡಿ: ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಗುರುವಾರ ಆರಂಭಗೊಂಡಿತು.
ಹತ್ತನೇ ತರಗತಿ ಪರೀಕ್ಷೆ ಬರೆದು ಮುಂದಿನ ಪಿಯು ಶಿಕ್ಷಣಕ್ಕಾಗಿ ಮಹದಾಸೆಯನ್ನಿಟ್ಟುಕೊಂಡಿರುವ ನೀಟ್/ ಜೆಇಇ/ ಸಿಇಟಿ ಮುಂತಾದ ಆಕಾಂಕ್ಷಿಗಳು ಈ ವಿದ್ವತ್ ಪ್ರೇರಣಾ ಕೋಚಿಂಗ್‌ಗೆ ನೋಂದಾಯಿಸಿಕೊಂಡಿದ್ದಾರೆ.
ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ ಮಾತನಾಡಿ, ವಿದ್ಯಾರ್ಥಿಗಳು ಪಿಯು ಕಾಲೇಜು ಅಭ್ಯಾಸದ ಸಮಯದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಎಚ್ಚರಿಕೆಯಿಂದ ತಯಾರಿ ಆರಂಭಿಸಬೇಕು ಎಂದರು.
ಡಾ.ಪ್ರದೀಪ್ ನಾವೂರ್ ಮಾತನಾಡಿ, ಸಾಧನೆ ಹಾದಿಯಲ್ಲಿ ಬರುವ ಸವಾಲು ಸ್ವೀಕರಿಸುವ ಬಗೆ ಹಾಗೂ ಆತ್ಮಶಕ್ತಿ ವೃದ್ಧಿಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ವಿದ್ವತ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಸುಭಾಷ್‌ಚಂದ್ರ ಶೆಟ್ಟಿ ಮಾತನಾಡಿದರು. ವಿದ್ವತ್ ಶಿಕ್ಷಣ ಪ್ರತಿಷ್ಠಾನ ಕಾರ್ಯದರ್ಶಿ ಪ್ರಜ್ವಲ್ ರೈ, ಹಿರಿಯ ಸಲಹೆಗಾರ ರಾಧಾಕೃಷ್ಣ ರೈ ಹಾಗೂ ವಿದ್ವತ್ ಪಿಯು ಕಾಲೇಜಿನ ಉಪನ್ಯಾಸಕರ ತಂಡ, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.