ನಿರ್ದಿಷ್ಟ ಗುರಿಯೆಡೆಗೆ ಸ್ಪಷ್ಟತೆ ಅವಶ್ಯ:ಸತೀಶ್ ರೈ ಅಭಿಮತ

blank

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು ಕಾರ್ಯಬದ್ಧತೆಯಿಂದ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ನಿರ್ದಿಷ್ಟ ಗುರಿಯೆಡೆಗೆ ಸ್ಪಷ್ಟತೆ ಇರಬೇಕು ಎಂದು ಅರ್ಜುನ ಪ್ರಶಸ್ತಿ ಪುರಸ್ಕೃತ ಒಲಿಂಪಿಯನ್, ಕೋಲ್ಕತದಲ್ಲಿನ ಯೂನಿಯನ್ ಬ್ಯಾಂಕ್ ಇಂಡಿಯಾ ಸಹಾಯಕ ಮಹಾಪ್ರಬಂಧಕ ಸತೀಶ್ ರೈ ಹೇಳಿದರು.

ವಿದ್ಯಾಗಿರಿಯ ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟಲಿಫ್ಟಿಂಗ್ ತರಬೇತಿ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶುಭ ಹಾರೈಸಿದರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಲೋಕನಾಥ ಬೋಳಾರ್ ಅವರ ಪತ್ನಿ ಡಾ.ದೇವಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಸ್.ರಮಾನಂದ ಶೆಟ್ಟಿ, ಉದ್ಯಮಿ ಕಿಶೋರ್ ಶೆಟ್ಟಿ, ವೇಯ್ಟಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಆಲ್ವಿನ್ ಪಿಂಟೋ, ಯುವಜನ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು.

ಬಳಿಕ ದಕ್ಷಿಣ ಕನ್ನಡ ವೇಯ್ಟಲಿಫ್ಟಿಂಗ್ ಸಂಘದ ಸಮಾಲೋಚನಾ ಸಭೆ ನಡೆಯಿತು. ಆಳ್ವಾಸ್ ಪಿಯು ಕಾಲೇಜಿನ ಕಲಾ ವಿಭಾಗದ ಡೀನ್ ಕೆ.ವೇಣುಗೋಪಾಲ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಹಲವಾರು ನುರಿತ ತರಬೇತುದಾರರ ಸಹಕಾರದಿಂದ ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ರಾಷ್ಟ್ರಮಟ್ಟ ಹಾಗೂ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವುದು ಹೆಮ್ಮೆಯ ಸಂಗತಿ. ಜಾತಿ, ಧರ್ಮ, ಮತ, ಪಂಥಗಳನ್ನು ಮೀರಿದ ಸಾಧಕರ ಹೆಸರುಗಳನ್ನು ಆಳ್ವಾಸ್ ಸಂಸ್ಥೆಯ ಹಲವು ಕಟ್ಟಡಗಳಿಗೆ ಇಡಲಾಗಿದೆ. ನೂತನವಾಗಿ ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟಲಿಫ್ಟಿಂಗ್ ತರಬೇತಿ ಕೇಂದ್ರ ಸೇರ್ಪಡೆಯಾಗಿದೆ. ಲೋಕನಾಥ ಬೋಳಾರ್ ಅವರನ್ನು ಮಾದರಿಯನ್ನಾಗಿಸಿ ಇಂದಿನ ಕ್ರೀಡಾ ವಿದ್ಯಾರ್ಥಿಗಳು ಅಭ್ಯಾಸ ನಡೆಸಬೇಕು.

ಡಾ.ಎಂ.ಮೋಹನ ಆಳ್ವ, ಅಧ್ಯಕ್ಷ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…