More

    ನ.೧೦ರಂದು ಯರಗೋಳ್ ಡ್ಯಾಂ ಉದ್ಘಾಟನೆ

    ಕೋಲಾರ: ಕೋಲಾರ, ಬಂಗಾರಪೇಟೆ, ಮಾಲೂರು ತಾಲೂಕುಗಳಿಗೆ ಕುಡಿಯುವ ನೀರು ಸರ್ಮಪಕವಾಗಿ ಕೊಡುವ ಮಹತ್ತರ ಯರಗೋಳ್ ಡ್ಯಾಂ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.೧೦ರಂದು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದರು.

    ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಡ್ಯಾಂ ಬಳಿಯೇ ಸಾರ್ವಜನಿಕರ ಸಭೆಯನ್ನು ಆಯೋಜಿಸಲಾಗಿದ್ದು, ಸಭೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ , ಸಚಿವರು, ಕಾಂಗ್ರೆಸ್ ಮುಖಂಡರು, ಜಿಲ್ಲೆಯ ಎಲ್ಲ ಶಾಸಕರು ಸೇರಿದಂತೆ ೨೫ ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

    ಹಿಂದಿನ ಸರ್ಕಾರ ವ್ಯವಸ್ಥಿತವಾಗಿ ನಿರ್ವಹಣೆ ಮಾಡದ ಕಾರಣ ವಿದ್ಯುತ್ ಸ್ಥಾವರಗಳು ಉತ್ಪಾದನೆ ಮಾಡದಿರುವುದರಿಂದ ವಿದ್ಯುತ್ ಅಭಾವಕ್ಕೆ ಕಾರಣವಾಗಿದೆ. ಹಾಗೆಯೇ ಅನೇಕ ಜಲಾಶಯದಲ್ಲಿ ನೀರಿಲ್ಲದೇ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ. ಆದ್ದರಿಂದ ಸರಿಯಾಗಿ ವಿದ್ಯುತ್ ಕೊಡಲು ಸಾಧ್ಯವಾಗಲಿಲ್ಲ. ಆದರೂ ರೈತರಿಗೆ ೩ ಕಾಂಗ್ರೆಸ್ ೫ ಗಂಟೆಗಳ ಕಾಲ ವಿದ್ಯುತ್ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ೬ ಅಥವಾ ೭ ಗಂಟೆಗಳ ಕಾಲ ವಿದ್ಯುತ್ ನೀಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

    ಹಿಂದಿನ ಬಿಜೆಪಿ ಸರ್ಕಾರವು ಪಟ್ಟಣದ ಕೋದಂಡರಾಮಸ್ವಾಮಿ ದೇವಾಲಯದ ಅಭಿವೃದ್ಧಿಗೆ ಮಂಜೂರಾಗಿದ್ದ ೮.೫ ಕೋಟಿ ರೂ.ಹಣವನ್ನು ಹಿಂದಕ್ಕೆ ಪಡೆದಿದ್ದರು. ಆದರೆ ನಾನು ಚುನಾವಣೆ ಸಮಯದಲ್ಲಿ ಮಾತುಕೊಟ್ಟಂತೆ ದೇವಾಲಯದ ಅಭಿವೃದ್ಧಿಗೆ ೧೫ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡುವಂತೆ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ನೀಡಿದ್ದೆ ಅದರಂತೆ ಇದೀಗ ಮೊದಲನೇ ಕಂತಿನಲ್ಲಿ ೫ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ ಎಂದು ಶಾಸಕರು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts