ಜ್ಞಾನ, ಶಿಕ್ಷಣದಿಂದ ಉನ್ನತ ಸ್ಥಾನ : ವಿದ್ಯಾರ್ಥಿ ಸರ್ಕಾರ ಉದ್ಘಾಟಿಸಿ ಮಂಜು ಎಂ.ಪೂಜಾರಿ ಅನಿಸಿಕೆ

student
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಅರೆಶಿರೂರು ಪ್ರೌಢಶಾಲೆಯ 2024-25ನೇ ಸಾಲಿನ ವಿದ್ಯಾರ್ಥಿ ಸರ್ಕಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಿರಿಮಂಜೇಶ್ವರ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕ ಮಂಜು ಎಂ.ಪೂಜಾರಿ ಮಾತನಾಡಿದರು
Published on

ವಿಜಯವಾಣಿ ಸುದ್ದಿಜಾಲ ಬೈಂದೂರು

ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಸಾಮಾನ್ಯ ಜ್ಞಾನ ಬೆಳೆಸಿಕೊಂಡು ಸಮಾಜದಲ್ಲಿ ಉನ್ನತ ಸ್ಥಾನಮಾನ ಗಳಿಸಬೇಕು. ಸತತ ಪ್ರಯತ್ನ ಮತ್ತು ಉನ್ನತ ಶಿಕ್ಷಣದಿಂದ ಮಹಾನ್ ವ್ಯಕ್ತಿಗಳಾಗಿ ಬೆಳೆಯಬಹುದು ಎಂದು ಕಿರಿಮಂಜೇಶ್ವರ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕ ಮಂಜು ಎಂ.ಪೂಜಾರಿ ಹೇಳಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರ್ಕಾರ ಉದ್ಘಾಟಿಸಿ ಮಾತನಾಡಿದರು.

ಉತ್ತಮ ಸಾಧನೆ ಮಾಡಿ ಗುರುತಿಸಿಕೊಂಡ ವ್ಯಕ್ತಿಗಳು ನಮಗೆ ಆದರ್ಶಪ್ರಾಯವಾಗಬೇಕು. ಅವರಲ್ಲಿನ ಉದಾತ್ತ ಗುಣ ಮೈಗೂಡಿಸಿಕೊಂಡು ನಾವು ಕೂಡ ಅವರಂತೆ ಜೀವನದಲ್ಲಿ ಸಾಕಷ್ಟು ಎತ್ತರಕ್ಕೆ ಏರಬೇಕು. ಕಲಿಕೆಗೆ ಪೂರಕವಾಗಿರುವ ಈಗಿನ ಎಲ್ಲ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು, ಭವ್ಯ ಭಾರತದ ಸತ್ಪ್ರಜೆಗಳಾಗಿ ಬೆಳೆಯಬೇಕು ಎಂದರು.

ಗೋಳಿಹೊಳೆ ಗ್ರಾಪಂ ಅಧ್ಯಕ್ಷ ವಸಂತ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಎ.ಶಿವರಾಮ ಸ್ವಾಗತಿಸಿ, ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸರ್ಕಾರದ ಮಾರ್ಗದರ್ಶಿ ಶಿಕ್ಷಕರಾದ ಸತೀಶ್ ವಂದಿಸಿ, ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಗೀತಾ ಎಚ್., ಭಾಸ್ಕರ ಭಟ್, ಗೋವಿಂದ ಗೊಂಡ, ಪ್ರಶಾಂತ ಶ್ಯಾನುಭಾಗ್ ಮತ್ತು ಆಶಾಲತಾ ವಿವಿಧ ಚಟುವಟಿಕೆ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net