ಉತ್ತಮ ಸಂಸ್ಕಾರ ಪಡೆದ ಮಕ್ಕಳಿಗಿದೆ ಸದೃಢ ಭವಿಷ್ಯ: ಮಾಜಿ ಶಾಸಕ ರುಕ್ಮಯ ಪೂಜಾರಿ ಅಭಿಮತ

2
Published on

ಬಂಟ್ವಾಳ: ಆಧುನಿಕ ಯಾಂತ್ರಿಕೃತ ಯುಗದಲ್ಲಿ ಉತ್ತಮ ಸಂಸ್ಕಾರ ಪಡೆದ ಮಕ್ಕಳು ಜೀವನದಲ್ಲಿ ದಾರಿ ತಪ್ಪುವುದಿಲ್ಲ ಎಂದು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಹೇಳಿದರು.

ದ.ಕ. ಜಿಲ್ಲಾ ಪಂಚಾಯಿತಿ, ಬಂಟ್ವಾಳ ತಾಪಂ, ನರಿಕೊಂಬು ಗ್ರಾಪಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಮಂಗಳೂರು ಎಂಆರ್‌ಪಿಎಲ್‌ನ ಸಿಎಸ್‌ಆರ್ ಅನುದಾನದಲ್ಲಿ 24 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ವೀರಮಾರುತಿ ಅಂಗನವಾಡಿ ಕೇಂದ್ರ ಕಟ್ಟಡ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಪ್ರಗತಿಪರ ಕೃಷಿಕ ಪದ್ಮನಾಭ ಮಯ್ಯ ಏಲಬೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಭಹಾರೈಸಿದರು. ನರಿಕೊಂಬು ಗ್ರಾಪಂ ಅಧ್ಯಕ್ಷ ಸಂತೋಷ್ ಕುಮಾರ್, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ತಾಜ್ ಎಚ್., ಉದ್ಯಮಿಗಳಾದ ಜಿತೇಂದ್ರ ಎಸ್.ಕೊಟ್ಟಾರಿ, ಸಚ್ಚಿದಾನಂದ ಶೆಟ್ಟಿ, ಬಂಟ್ವಾಳ ಶಿಶು ಅಭಿವೃದ್ಧಿ ಮೇಲ್ವಿಚಾರಕಿ ನೀತಾ, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಉಮೇಶ್ ಬೋಳಂತೂರು, ಉದ್ಯಮಿ ಸಂದೇಶ, ಗೋಳ್ತಮಜಲ್ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ಜಿನರಾಜ್ ಕೋಟ್ಯಾನ್ ಮೈರಡ್ಕ, ನರಿಕೊಂಬು ಶಕ್ತಿಕೇಂದ್ರ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಹೊಸಲಚ್ಚಿಲು, ತಾಪಂ ಮಾಜಿ ಉಪಾಧ್ಯಕ್ಷ ಆನಂದ ಶಂಭೂರು, ವೀರಮಾರುತಿ ವ್ಯಾಯಾಮ ಶಾಲಾ ಟ್ರಸ್ಟ್ ಅಧ್ಯಕ್ಷ ಉಮೇಶ್ ಕೋಡಿಮಜಲು, ಗ್ರಾಪಂ ಸದಸ್ಯರಾದ ಶುಭ ಶಶಿಧರ್, ಪ್ರಕಾಶ್ ಕೋಡಿಮಜಲ್, ಶಿಶು ಅಭಿವೃದ್ಧಿ ಯೋಜನೆಯ ನಿವೃತ್ತ ಅಧಿಕಾರಿ ಸುಧಾ ಜೋಶಿ, ಹರಿಣಾಕ್ಷಿ ಮಾಣಿಮಜಲ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಐಶ್ವರ್ಯಾ ಉಪಸ್ಥಿತರಿದ್ದರು. ಬಾಲವಿಕಾಸ ಸಮಿತಿ ಸದಸ್ಯ ಚಂದ್ರಹಾಸ್ ಕೋಡಿಮಜಲು ಸ್ವಾಗತಿಸಿದರು. ಅಂಗನವಾಡಿ ಶಿಕ್ಷಕಿ ಶೋಭಾ ವರದಿ ವಾಚಿಸಿದರು. ರಾಜೇಶ್ ಕೊಟ್ಟಾರಿ ಕಲ್ಲಡ್ಕ ನಿರೂಪಿಸಿದರು. ನಯನಾ ಯಾದವ್ ವಂದಿಸಿದರು.

ಪ್ರಮುಖರಿಗೆ ಗೌರವಾರ್ಪಣೆ

ಸದಾಶಿವ ಕುಲಾಲ್ ವಾರುತಿ ನಗರ, ನರಿಕೊಂಬು ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶೋಭಾ, ಗುತ್ತಿಗೆದಾರ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಬಂಟ್ವಾಳ ತಾಪಂ ಮಾಜಿ ಅಧ್ಯಕ್ಷೆ ಸುನೀತಾ ಪದ್ಮನಾಭ ಹಾಗೂ ಪ್ರಮೀಳಾ ಮಾರುತಿನಗರ ಅವರನ್ನು ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net