More

    ನಿಮಗೆ ಧಮ್ಮು, ತಾಕತ್ತು ಇದ್ದರೆ…; ಪ್ರಧಾನಿ ಮೋದಿಗೆ ಸವಾಲೆಸೆದ ಕಾಂಗ್ರೆಸ್​

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನದ ದಿನ ಸಮೀಪಿಸಿರುವ ಬೆನ್ನಲ್ಲೇ ಬಿಜೆಪಿ ವಿರುದ್ಧ ತನ್ನ ಟೀಕೆಗಳನ್ನು ಮುಂದುವರೆಸಿರುವ ಕಾಂಗ್ರೆಸ್​ ಶುಕ್ರವಾರ ಸರಣಿ ಟ್ವೀಟ್​ಗಳನ್ನು ಮಾಡಿದೆ.

    ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿರುವುದರ ವಿಚಾರವಾಗಿ ಟೀಕಿಸಿದೆ.

    ಭ್ರಷ್ಟಾಚಾರಕ್ಕೆ ಮಹಾಪೋಷಕರು

    ರೌಡಿಗಳಿಗೆ ಕೈ ಮುಗಿಯುತ್ತಾರೆ ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ. ಆದರೆ ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಇಂತಹ ಅಪರೂಪದ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರಕ್ಕೆ ಮಹಾಪೋಷಕರು ಎಂದು ಕಿಡಿಕಾರಿದೆ.

    ಇದನ್ನೂ ಓದಿ: ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಮತ್ತೊಮ್ಮೆ ಶಾಕ್ ನೀಡಿದ ಕೋರ್ಟ್​; ಧಾರವಾಡಕ್ಕೆ ನೋ ಎಂಟ್ರಿ

    ನಿಮಗೆ ಧಮ್ಮು, ತಾಕತ್ತು ಇದ್ದರೆ…

    ಪ್ರಧಾನಿ ನರೇಂದ್ರ ಮೋದಿ ಅವರೇ ನಿಮಗೆ ಧಮ್ಮು, ತಾಕತ್ತು ಇದ್ದರೆ ಒಂದೇ ಒಂದು ಬಾರಿ ಗುತ್ತಿಗೆದಾರರ ಸಂಘದವರೊಂದಿಗೆ ಮಾತನಾಡಿ. ಒಂದೇ ಒಂದು ಬಾರಿ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದೊಂದಿಗೆ ಮಾತನಾಡಿ. ಒಂದೇ ಒಂದು ಬಾರಿ PSI ಹಗರಣದಿಂದ ಸಂತ್ರಸ್ತರಾದ ಅಭ್ಯರ್ಥಿಗಳೊಂದಿಗೆ ಮಾತನಾಡಲು ಸಾಧ್ಯವೇ ಎಂದು ಪ್ರಶ್ನಿಸಿದೆ.

    ಬುಡಕಟ್ಟು ಜನರ ಬಗ್ಗೆ ತಾತ್ಸಾರವೇಕೆ

    ಸೂಡಾನ್‌ನಲ್ಲಿ ಸಿಲುಕಿದ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದವರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದ ಕ್ರಮಗಳೇನು. ಕೇಂದ್ರ & ರಾಜ್ಯ ಸರ್ಕಾರಗಳು ಏಕೆ ಈ ಬಗ್ಗೆ ಮೌನವಹಿಸಿವೆ.

    ಭ್ರಷ್ಟರಿಗೆ ಕರೆ ಮಾಡಿ ಕುಶಲೋಪರಿ ವಿಚಾರಿಸುವ ನರೇಂದ್ರ ಮೋದಿ ಅವರೇ, ನಮ್ಮ ಜನರನ್ನು ರಕ್ಷಿಸುವಲ್ಲಿ ಆಸಕ್ತಿ ಇಲ್ಲವೇಕೆ. ಬುಡಕಟ್ಟು ಜನರ ಬಗ್ಗೆ ತಾತ್ಸಾರವೇಕೆ ಎಂದು ಸರಣಿ ಟ್ವೀಟ್​ಗಳನ್ನು ಮಾಡುವ ಮೂಲಕ ರಾಜ್ಯ ಕಾಂಗ್ರೆಸ್​ ಬಿಜೆಪಿ ವಿರುದ್ಧ ಹರಿಹಾಯ್ದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts