More

    ಬಿಜೆಪಿಯ ರಾಜಕೀಯ ದುರುದ್ದೇಶವು ಜನತೆಯನ್ನು ಬಲಿಪಶು ಮಾಡುತ್ತಿದೆ: ಕಾಂಗ್ರೆಸ್​

    ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್​ ನಡುವಿನ ವಾಕ್ಸಮರ ಮುಂದುವರೆದಿದ್ದು, ಎರಡು ಪಕ್ಷಗಳ ನಡುವಿನ ಕದನ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ.

    ಭಾರತತೀಯ ಆಹಾರ ನಿಗಮ(FCI) ಕರ್ನಾಟಕ ಸರ್ಕಾರಕ್ಕೆ ಅಕ್ಕಿ ಮಾರಾಟ ಮಾಡಲು ನಿರಾಕರಿಸಿದ ಬೆನ್ನಲ್ಲೇ ಈ ಹರಾಜು ಪ್ರಕ್ರಿಯೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನಲೆ ಕರ್ನಾಟಕ ಕಾಂಗ್ರೆಸ್​ ಟ್ವೀಟ್​ ಮೂಲಕ ಬಿಜೆಪಿಯನ್ನು ಕುಟುಕಿದೆ.

    INC Karnataka Tweet

    ಇದನ್ನೂ ಓದಿ: ಕುಲು-ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ನಾಲ್ವರು ನಾಪತ್ತೆ

    ಕರ್ನಾಟಕಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿದ ಕೇಂದ್ರ ಆಹಾರ ನಿಗಮದ ಹರಾಜು ಪ್ರಕ್ರಿಯೆಯಲ್ಲಿ ಅಕ್ಕಿ ಖರೀದಿಗೆ ಖಾಸಗಿ ಕಂಪೆನಿಗಳು ಆಸಕ್ತಿಯೇ ತೋರುತ್ತಿಲ್ಲ. ನಮ್ಮ ಸರ್ಕಾರ 34 ರೂಪಾಯಿಗಳ ಖರೀದಿ ದರಕ್ಕೆ ಕೇಳಿದರೂ ನಿರಾಕರಿಸಿದ ಕೇಂದ್ರ ಸರ್ಕಾರ ಖಾಸಗಿಯವರಿಗೆ 31 ರೂಪಾಯಿಗಳಿಗೆ ನೀಡಲು ಸಿದ್ಧವಾದರೂ ಖರೀದಿದಾರರು ಮುಂದೆ ಬರುತ್ತಿಲ್ಲ.

    ಹುಳು ಹಿಡಿದು ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ ಬಿಜೆಪಿಯದ್ದು. ಬಿಜೆಪಿಯ ರಾಜಕೀಯ ದುರುದ್ದೇಶವು ಜನತೆಯನ್ನು ಬಲಿಪಶು ಮಾಡುತ್ತಿದೆ. ನಾವು ಕೊಟ್ಟ ಮಾತಿನಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದೇವೆ. 10 ಕೆ.ಜಿ ಅಕ್ಕಿ ನೀಡುವವರೆಗೂ ಹೆಚ್ಚುವರಿ ಐದು ಕೆ.ಜಿ ಅಕ್ಕಿಯ ಹಣವನ್ನು ಜನರಿಗೆ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ರಾಜ್ಯ ಕಾಂಗ್ರೆಸ್​ ಟ್ವೀಟ್​ ಮೂಲಕ ಬಿಜೆಪಿಯನ್ನು ಕುಟುಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts