More

    ಪ್ರೋತ್ಸಾಹಧನ ನೀಡದಿದ್ದರೆ ಸೇವೆ ಸ್ಥಗಿತ

    ಬೆಳಗಾವಿ: ಕೋವಿಡ್-19 ಸೋಂಕಿತರ ಸೇವೆಯಲ್ಲಿರುವ ಡಿ ದರ್ಜೆ ನೌಕರರಿಗೆ ಪ್ರೋತ್ಸಾಹಧನ ನೀಡಬೇಕು ಎಂದು ಒತ್ತಾಯಿಸಿ ಬಿಮ್ಸ್ ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

    ಕರೊನಾ ಸಂಕಷ್ಟ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಡಿ ದರ್ಜೆ ನೌಕರರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಮಾಸಿಕ ತಲಾ 10 ಸಾವಿರ ರೂ. ಕೋವಿಡ್-19 ರಿಸ್ಕ್ ಪ್ರೋತ್ಸಾಹಧನ ಮಂಜೂರುಗೊಳಿಸಿದೆ. ಆದರೆ, ಬಿಮ್ಸ ಅಧಿಕಾರಿಗಳು ಈವರೆಗೂ ನೀಡಿಲ್ಲ.

    ಹೀಗಾಗಿ ಪ್ರೋತ್ಸಾಹಧನ ನೀಡುವಂತೆ ಜಿಲ್ಲಾಧಿಕಾರಿಗಳು ತಕ್ಷಣವೇ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಇಲ್ಲದಿದ್ದರೆ ಸೆ. 14ರಿಂದ ಸೇವೆ ಸ್ಥಗಿತಗೊಳಿಸುತ್ತೇವೆ ಎಂದು ಎಚ್ಚರಿಸಿದರು. ಸಂಘದ ಅಧ್ಯಕ್ಷ ಮಾರುತಿ ಕೋಲಕಾರ, ಉಪಾಧ್ಯಕ್ಷ ಸಂತೋಷ ಕಾಂಬಳೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts