ಯಾವುದೇ ಸಚಿವ, ಶಾಸಕ, ಸಂಸದರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿಲ್ಲ ಎಂದು ಐಟಿ ಅಧಿಕಾರಿಗಳ ಸ್ಪಷ್ಟನೆ

Latest News

ಚಲಿಸುತ್ತಿದ್ದ ಟ್ರಾಕ್ಟರ್​ಗೆ ನೆಲಕ್ಕೆ ಬಾಗಿದ ವಿದ್ಯುತ್​ ಕಂಬದ ತಂತಿ ಸ್ಪರ್ಶ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಚಾಲಕ

ಬಾಗಲಕೋಟೆ: ಚಲಿಸುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್​ ಹರಿದು ಚಾಲಕ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಕಂಕಣವಾಗಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗ ಸೋಮರಾಯ ಸವಣೂರ (20) ವಿದ್ಯುತ್​...

ಮೇ 30ರ ವರೆಗೂ ಹರಿಯಲಿ ನೀರು: ಕರ್ನಾಟಕ ರೈತ ಹಿತರಕ್ಷಣಾ ವೇದಿಕೆ ಒತ್ತಾಯ

ಗಂಗಾವತಿ: ಎರಡನೇ ಬೆಳೆಗಾಗಿ ತುಂಗಭದ್ರಾ ಎಡದಂಡೆ ಕಾಲುವೆಗೆ ಮೇ 30ರವರೆಗೂ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕದ...

ಕಾಡಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ ಮಾಜಿ ಸಚಿವ ಶಿವರಾಜ್ ತಂಗಡಗಿ

ಕಾರಟಗಿ: ತುಂಗಭದ್ರಾ ಜಲಾಶಯದಲ್ಲಿ 96 ಟಿಎಂಸಿ ಅಡಿ ನೀರಿದ್ದರೂ ಎರಡನೇ ಬೆಳೆಗೆ ನೀರು ಬಿಡಲು ಸರ್ಕಾರ ಮೀನ ಮೇಷ ಎಣಿಸುತ್ತಿರುವುದು ನಾಚಿಕೆಗಢು. ಏ.20ರ...

ಐತಿಹಾಸಿಕ ಪಿಂಕ್​ಬಾಲ್, ಅಹರ್ನಿಶಿ ಟೆಸ್ಟ್​ನಲ್ಲಿ 106 ಕ್ಕೆ ಆಲ್​ ಔಟ್​ ಆದ ಬಾಂಗ್ಲಾ ಹುಲಿಗಳು: ಪ್ರಭುತ್ವ ಮೆರೆದ ಭಾರತದ ವೇಗಿಗಳು

ಕೋಲ್ಕತ: ಬಾಂಗ್ಲಾದೇಶದ ವಿರುದ್ಧ ಈಡನ್ ಗಾರ್ಡನ್​ನಲ್ಲಿ ನಡೆಯುತ್ತಿರುವ ಮೊದಲ ಅಹರ್ನಿಶಿ ಟೆಸ್ಟ್​ ಕ್ರಿಕೆಟ್​​ ಪಂದ್ಯದ ಮೊದಲದಿನ ಭಾರತ ಕ್ರಿಕೆಟ್​ ತಂಡ ಪ್ರಭುತ್ವ ಮೆರೆದಿದೆ....

ಬೆಂಗಳೂರು: ಮೈಸೂರು, ಮಂಡ್ಯ, ಹಾಸನ ಮತ್ತು ಶಿವಮೊಗ್ಗ ಸೇರಿ ಹಲವೆಡೆ ಗುರುವಾರ ನಡೆದಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಯ ಸಂದರ್ಭದಲ್ಲಿ ಯಾವುದೇ ಸಚಿವರು, ಶಾಸಕರು ಅಥವಾ ಸಂಸದರನ್ನು ಗುರಿಯಾಗಿಸಿಕೊಂಡಿಲ್ಲ. ಬದಲಿಗೆ ದೊರೆತಿರುವ ಖಚಿತ ಮಾಹಿತಿಯನ್ನು ಆಧರಿಸಿ ಗುತ್ತಿಗೆದಾರರು ಮತ್ತವರ ಸಂಬಂಧಿಕರ ಮೇಲೆ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಕರ್ನಾಟಕ-

ಗೋವಾ ವಲಯದ ಆದಾಯ ತರಿಗೆ ಇಲಾಖೆ ಆಯುಕ್ತರ ಕಚೇರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಮನವಿ ಮೇರೆಗೆ ಶಿಷ್ಟಾಚಾರದ ಪ್ರಕಾರ ಸಿಆರ್​ಪಿಎಫ್​ ಸಿಬ್ಬಂದಿಯನ್ನು ಭದ್ರತಾ ವ್ಯವಸ್ಥೆಗಳಿಗಾಗಿ ಬಳಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ವಿವಿಧ ಬಗೆಯ ವೃತ್ತಿಗಳು ಮತ್ತು ವ್ಯಾಪಾರ ವಹಿವಾಟು ನಡೆಸುತ್ತಿರುವವರು ಸೇರಿ ಅಧಿಕಾರಶಾಹಿ ವರ್ಗ, ಸಂಸ್ಕರಣಾ ಘಟಕಗಳು, ಬಹುರಾಷ್ಟ್ರೀಯ ಕಂಪನಿಗಳು, ಗಣಿಧಣಿಗಳು, ವಿವಿಧ ಟ್ರಸ್ಟ್​ಗಳು, ಶೈಕ್ಷಣಿಕ ಸಂಸ್ಥೆಗಳು, ರಿಯಲ್​ ಎಸ್ಟೇಟ್​, ಮೀನುಗಾರಿಕೆ ಮತ್ತು ಚಲನಚಿತ್ರ ರಂಗಕ್ಕೆ ಸಂಬಂಧಪಟ್ಟವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ತೆರಿಗೆ ವಂಚನೆ ಸಂಬಂಧಿತವಾಗಿ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿಗಳನ್ನು ಸಂಘಟಿಸಲಾಗಿದೆ ಎಂದು ವಿವರಿಸಿದ್ದಾರೆ.

ದಾಳಿಗಳ ವೇಳೆ ದಾಳಿಗೊಳಗಾದವರೆಲ್ಲರೂ ರಾಜಕೀಯ ಪ್ರಭಾವ ಹೊಂದಿದವರಾಗಿದ್ದರು ಎಂಬುದು ಪತ್ತೆಯಾಗಿದೆ. ಹಾಗೆಂದ ಮಾತ್ರಕ್ಕೆ ಇದು ರಾಜಕೀಯ ಪ್ರೇರಿತ ದಾಳಿಯಲ್ಲ. ಆದಾಯ ತೆರಿಗೆ ಇಲಾಖೆಯು ಅತ್ಯಂತ ವೃತ್ತಿಪರವಾಗಿ ಕಾರ್ಯನಿರ್ವಹಿಸುತ್ತಿದೆ. ಆದ್ದರಿಂದ ಈ ವಿಷಯವನ್ನು ರಾಜಕೀಯಕರಣಗೊಳಿಸದಂತೆ ಎಲ್ಲರಲ್ಲೂ ಮನವಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆ ಮೇಲೆ ದಾಳಿ ಮಾಡುವ ರೀತಿ ಉನ್ನತ ಅಧಿಕಾರದಲ್ಲಿರುವವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -

Stay connected

278,668FansLike
576FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...