More

    ಆಸ್ಪತ್ರೆ, ಲ್ಯಾಬ್, ಡಯಾಗ್ನಸ್ಟಿಕ್ ಸೆಂಟರ್‌ಗಳ ಮೇಲೆ ಐಟಿ ದಾಳಿ

    ಬೆಂಗಳೂರು: ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿ ಹಲವೆಡೆ ಆಸ್ಪತ್ರೆ, ಲ್ಯಾಬ್ ಮತ್ತು ಡಯಾಗ್ನಸ್ಟಿಕ್ ಸೆಂಟರ್‌ಗಳ ಮೇಲೆ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

    ಮುಂಬೈನಿಂದ ಆಗಮಿಸಿದ ಐಟಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದೆ. 7 ಇನೋವಾ ಕಾರುಗಳಲ್ಲಿ ಬಂದ ಐಟಿ ಅಧಿಕಾರಿಗಳು, ಮುಂಜಾನೆ 4 ಗಂಟೆಗೆ ಸಿಆರ್‌ಪಿಎಫ್​ ಭದ್ರತೆ ನಡುವೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಆರ್.ವಿ. ಮೆಟ್ರೊ ಪೊಲಿಸ್ ಲ್ಯಾಬ್ ಮೇಲೆ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಲ್ಯಾಬ್ ಸಿಬ್ಬಂದಿಯನ್ನು ವಿಚಾರಣೆ ನಡೆಸಿದರು.

    ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ರೋಗಿಗಳ ವಿವರವನ್ನು ನೀಡದೆ ಸುಳ್ಳು ಮಾಹಿತಿ ನೀಡಿ ಸರ್ಕಾರದಿಂದ ಹೆಚ್ಚಿನ ಹಣ ಪಡೆದುಕೊಂಡು ಆದಾಯ ವಂಚನೆ ಮಾಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

    ಮಲ್ಲೇಶ್ವರದ 15ನೇ ಕ್ರಾಸ್‌ನಲ್ಲಿರುವ ಆರ್.ವಿ. ಮೆಟ್ರೊ ಪೊಲಿಸ್ ಲ್ಯಾಬ್ ಮತ್ತು ಡಯಾಗ್ನಸ್ಟಿಕ್ ಸೆಂಟರ್‌ನ ಮುಖ್ಯಸ್ಥ ನಾಗಭೂಷಣ ರಾವ್ ಹಾಗೂ ಅವರ ಪುತ್ರ ರವಿಕುಮಾರ್ ಮನೆ ಮೇಲೂ ಐಟಿ ದಾಳಿಯಾಗಿದೆ. ಅವರನ್ನು ವಿಚಾರಣೆ ನಡೆಸಿ ಕೋವಿಡ್ ಸಂದರ್ಭದಲ್ಲಿ ಎಷ್ಟು ಜನ ದಾಖಲಾಗಿದ್ದರು? ಅವರಿಗೆ ಇಲ್ಲಿ ಎಷ್ಟು ದಿನ ಚಿಕಿತ್ಸೆ ನೀಡಲಾಗಿತ್ತು? ಒಬ್ಬ ರೋಗಿಗೆ ನಿಗದಿ ಪಡಿಸಿದ ಚಿಕಿತ್ಸಾ ದರ ಎಷ್ಟು? ಇತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ ಮಾಹಿತಿಯನ್ನು ಪಡೆದಿದ್ದಾರೆ. ಇದೇ ರೀತಿ ಹುಬ್ಬಳ್ಳಿ, ಮುಂಬೈನಲ್ಲೂ ಐಟಿ ಅಧಿಕಾರಿಗಳು ಕೆಲವು ಖಾಸಗಿ ಲ್ಯಾಬ್‌ಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

    ಬೆಂಗ್ಳೂರಲ್ಲಿ ವಿಕೃತ ಮನಸ್ಥಿತಿಯ ವೈದ್ಯ ಅರೆಸ್ಟ್​! ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳೆಯರ ಖಾಸಗಿ ಅಂಗಗಳ ವಿಡಿಯೋ ಚಿತ್ರೀಕರಿಸುತ್ತಿದ್ದ…

    ಗಂಡನ ಮನೆಗೆ ಹೋಗವ್ವಾ… ಎಂದು ತಾಯಿ ಬುದ್ಧಿಮಾತು ಹೇಳಿದ್ದೇ ತಪ್ಪಾ? ಮನನೊಂದು ಸಾವಿನ ಮನೆಯ ಕದ ತಟ್ಟಿದ ಮಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts