More

    ಒಳಬರುವವರಿಗೆ ಆರ್‌ಟಿಪಿಸಿಆರ್ ಕಡ್ಡಾಯ

    ಬೆಳಗಾವಿ: ಮಹಾರಾಷ್ಟ್ರದಲ್ಲಿ ಕರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಂದ ರಾಜ್ಯದ ಗಡಿ ಪ್ರವೇಶಿಸುವವರಿಗೆ ಆರೋಗ್ಯ ಇಲಾಖೆಯು ಆರ್‌ಟಿಪಿಸಿಆರ್ ತಪಾಸಣೆ ವರದಿ ಕಡ್ಡಾಯಗೊಳಿಸಿದೆ.

    ಕೆಲ ವಾರಗಳಿಂದ ಮಹಾರಾಷ್ಟ್ರದ ಐದಾರು ಜಿಲ್ಲೆಗಳಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಅಲ್ಲದೆ, ಕೆಲ ಭಾಗಗಳಲ್ಲಿ ಅಲ್ಲಿನ ಸರ್ಕಾರ ಲಾಕ್‌ಡೌನ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಗಡಿ ಭಾಗದಲ್ಲಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ 14 ಚೆಕ್‌ಪೋಸ್ಟ್ ತೆರೆಯಲಾಗಿದೆ.

    ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಬೆಳಗಾವಿ, ಖಾನಾಪುರ, ಅಥಣಿ, ನಿಪ್ಪಾಣಿ, ಕಾಗವಾಡ, ಚಿಕ್ಕೋಡಿ ತಾಲೂಕು ವ್ಯಾಪ್ತಿಯ ಗಡಿಭಾಗದಲ್ಲಿ ಈಗಾಗಲೇ ಚೆಕ್‌ಪೋಸ್ಟ್ ತೆರೆಯಲಾಗಿದೆ. ಕಂದಾಯ, ಗ್ರಾಪಂ ಹಾಗೂ ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರು ಹಾಗೂ ವೈದ್ಯಕೀಯ ಸಿಬ್ಬಂದಿ ಮೂವರು ಸೇರಿ ಒಟ್ಟು 7 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ದಿನದ 24 ಗಂಟೆಯೂ ಸರತಿ ಆಧಾರದಲ್ಲಿ 120ಕ್ಕೂ ಅಧಿಕ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಥರ್ಮಲ್ ಸ್ಕ್ರೀನಿಂಗ್: ಮಹಾರಾಷ್ಟ್ರದಿಂದ ಬಂದವರಿಗೆ ಕೋವಿಡ್-19 ನಿಯಂತ್ರಣ ಮಾನದಂಡ ಕಡ್ಡಾಯವಾಗಿದ್ದು, ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಕರೊನಾ ಲಕ್ಷಣ ಕಂಡುಬಂದವರಿಗೆ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ. ಆರ್‌ಟಿಪಿಸಿಆರ್ ವರದಿಯಲ್ಲಿ ಪಾಸಿಟಿವ್ ಇದ್ದವರಿಗೆ ಕ್ವಾರಂಟೈನ್‌ಗೆ ಒಳಪಡಿಸಲು ಸೂಚಿಸಲಾಗುತ್ತಿದೆ. ವಾಹನದಲ್ಲಿ ನಿಯಮ ಮೀರಿ ಜನರಿದ್ದರೆ, ಮಾಸ್ಕ್ ಧರಿಸದಿದ್ದರೆ ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳದವರಿಗೆ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತಿದೆ ಎಂದು ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಯಲ್ಲಮ್ಮ ದರ್ಶನಕ್ಕೆ ಸಾವಿರಾರು ಭಕ್ತರು ಮುಂಜಾಗ್ರತಾ ಕ್ರಮವಾಗಿ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹೀಗಾಗಿ ಮಹಾರಾಷ್ಟ್ರದಿಂದ ಬರುವ ಭಕ್ತರ ಸಂಖ್ಯೆ ತುಸು ಕಡಿಮೆಯಾಗಿದ್ದರೂ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಯಲ್ಲಮ್ಮನ ಗುಡ್ಡಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಬುಧವಾರ ಧಾರವಾಡ-ಗೋಕಾಕ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.

    ಮಹಾರಾಷ್ಟ್ರದಿಂದ ರಸ್ತೆ ಮಾರ್ಗವಾಗಿ ಕರ್ನಾಟಕದ ಗಡಿ ಪ್ರವೇಶಿಸುವವರಿಗೆ ಆರ್‌ಟಿಪಿಸಿಆರ್ ವರದಿ ಕಡ್ಡಾಯಗೊಳಿಸಲಾಗಿದೆ. ಆದರೆ, ನಿತ್ಯವೂ ಮಹಾರಾಷ್ಟ್ರ ಮತ್ತು ಬೆಳಗಾವಿ ಮಧ್ಯೆ ಸಂಚರಿಸುವ ವಿವಿಧ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಅವರ ಗುರುತಿನ ಚೀಟಿ ತೋರಿಸಿದರೆ ಅವರ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಸದ್ಯ ಮಹಾರಾಷ್ಟ್ರದಿಂದ ಬಂದವರಲ್ಲಿ ಹೊಸದಾಗಿ ಕೋವಿಡ್-19 ಪತ್ತೆಯಾಗಿಲ್ಲ.
    | ಡಾ. ಎಸ್.ವಿ. ಮುನ್ಯಾಳ ಬೆಳಗಾವಿ ಜಿಲ್ಲಾ ವೈದ್ಯಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts