More

    ಕರೊನಾ ಉಪ ತಳಿ ಜೆಎನ್-1 ಹೆಚ್ಚಳ: ಡಾ. ಆರ್.ಸೆಲ್ವಮಣಿ

    ಶಿವಮೊಗ್ಗ: ಕರೊನಾ ಉಪ ತಳಿ ಜೆಎನ್-1 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜ್ವರ, ಕೆಮ್ಮು, ನೆಗಡಿ ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ವೈದ್ಯಕೀಯ ಸಲಹೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸೂಚಿಸಿದ್ದಾರೆ.

    ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ. ಉತ್ತಮ ವೈದ್ಯಕೀಯ ಸ್ವಚ್ಛತೆ ಆಗ್ಗಾಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು ಇತ್ಯಾದಿಗಳ ಪಾಲನೆಗಳು ಅಗತ್ಯವಾಗಿದೆ ಎಂದಿದ್ದಾರೆ.
    60 ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ.
    ಕರೊನಾ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡುತ್ತಾ ಬಂದಿದ್ದೇವೆ. ಆದರೂ ಪ್ರಸ್ತುತ ಕೇರಳ ರಾಜ್ಯದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ತಮಿಳುನಾಡು ಮತ್ತು ಕೇರಳ ರಾಜ್ಯದಲ್ಲಿ ಸೋಂಕಿನ ಉಪತಳಿ ವರದಿ ಆಗಿರುವುದರಿಂದ ಚಳಿಗಾಲದ ಹವಾಮಾನ, ಕ್ರಿಸ್‌ಮಸ್ ಹಾಗೂ ಹೊಸವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆ, ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕರೊನಾವನ್ನು ರಾಜ್ಯ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನಂತೆ ಕ್ರಮಗಳನ್ನು ಸಾರ್ವಜನಿಕರು ಪಾಲಿಸುವಂತೆ ಸೂಚಿಸಿದ್ದಾರೆ.
    ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಹಿರಿಯ ನಾಗರೀಕರು, ದುರ್ಬಲರು, ಆರೋಗ್ಯ ಸಮಸ್ಯೆಗಳನ್ನು ಹೊಂದಿದವರನ್ನು ಅವಶ್ಯವಿದ್ದರೆ ಮಾತ್ರ ಭೇಟಿ ನೀಡುವುದು. ಜನಸಂದಣಿ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಿದ್ದಾರೆ.
    ಅಂತಾರಾಷ್ಟ್ರೀಯ ಪ್ರಯಾಣ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೇರಿದಂತೆ ಅಗತ್ಯ ಮುಂಜಾಗ್ರತ ಕ್ರಮ ಪಾಲಿಸುವಂತೆ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts