ಕುಮಟಾ: ಇತ್ತೀಚೆಗೆ ದ್ವಿಚಕ್ರ ವಾಹನ ಅಪಘಾತ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಡ್ರಿಂಕ್ ಆಂಡ್ ಡ್ರೈವ್ ಮೇಲೆ ವಿಶೇಷ ನಿಗಾ ಇಟ್ಟಿರುವ ಪೊಲೀಸರು ಪದೇ ಪದೆ ವಾಹನ ತಪಾಸಣೆ ನಡೆಸಿ ಅಂಥ ಪ್ರಕರಣಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.

ಇಲ್ಲಿನ ಸಿಪಿಐ ಯೋಗೇಶ ಕೆ. ಎಂ. ನೇತೃತ್ವದಲ್ಲಿ ಪಿಎಸ್ಐ ಹಾಗೂ ಸಿಬ್ಬಂದಿ, ತಾಲೂಕಿನ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಇತರ ಆಯಕಟ್ಟಿನ ಸ್ಥಳಗಳಲ್ಲಿ ಮಂಗಳವಾರ ರಾತ್ರಿ ತಪಾಸಣೆ ನಡೆಸಿದರು. ಈ ವೇಳೆ ಮದ್ಯಪಾನ ಮಾಡಿ ದ್ವಿಚಕ್ರವಾಹನ ಚಲಾಯಿಸುತ್ತಿದ್ದ 13 ಸವಾರರನ್ನು ಹಿಡಿದು ವೈದ್ಯಕೀಯವಾಗಿ ತಪಾಸಣೆ ನಡೆಸಿ ಖಚಿತ ಪಡಿಸಿಕೊಂಡಿದ್ದಾರೆ. ಎಲ್ಲ 13 ಬೈಕ್ ಅನ್ನು ವಶಪಡಿಸಿಕೊಂಡು ಠಾಣೆಗೆ ತರಲಾಗಿದ್ದು ಕಾನೂನು ಕ್ರಮ ಜರುಗಿಸಿದ್ದಾರೆ.
ಮದ್ಯಪಾನ ಮಾಡಿ ವಾಹನ ಚಾಲನೆ ಅಪಘಾತಗಳು ಹೆಚ್ಚಲು ಮುಖ್ಯ ಕಾರಣವಾಗಿದೆ. ಇನ್ನು ಮುಂದೆಯೂ ಇದೇ ರೀತಿ ಮದ್ಯಪಾನ ಮಾಡಿ ವಾಹನ ಚಲಾಯಿಸುವ ಸವಾರರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.