More

    ಮಾದಕ ವಸ್ತುಗಳಿಂದ ಅಪರಾಧ ಕೃತ್ಯಗಳು ಹೆಚ್ಚಳ

    ಶ್ರವಣಬೆಳಗೊಳ: ಮಾದಕ ವ್ಯಸನ ಇತ್ತೀಚೆಗೆ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಕಾನೂನು ಉಲ್ಲಂಘನೆ ಹಾಗೂ ಅಪರಾಧ ಕೃತ್ಯಗಳು ಹೆಚ್ಚಳವಾಗಿದೆ ಎಂದು ಜೆಎಂಎಫ್‌ಸಿ ಮತ್ತು ಎರಡನೇ ಅಧಿಕ ಸಿವಿಲ್ ನ್ಯಾಯಾಧೀಶರಾದ ಪಿ.ಮಮತಾ ಹೇಳಿದರು.

    ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ವತಿಯಿಂದ ಪಟ್ಟಣದ ಬಾಹುಬಲಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ಮಾದಕ ವಸ್ತುಗಳ ನಿರ್ಮೂಲನೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಹಲವಾರು ವಿದ್ಯಾರ್ಥಿಗಳು ಹದಿಹರೆಯದ ವಯಸ್ಸಿನಲ್ಲಿ ಮಾದಕ ವಸ್ತುಗಳಿಗೆ ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಅವರ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು.
    ವೈದ್ಯಾಧಿಕಾರಿ ಡಾ.ಚಿದಾನಂದ್ ಮಾತನಾಡಿ, ಮಾದಕ ವಸ್ತುಗಳ ಬಳಕೆಯಿಂದ ಆತ್ಮಹತ್ಯೆ ಪ್ರಮಾಣ ಹೆಚ್ಚಾಗುತ್ತಿದ್ದು, ಕರ್ನಾಟಕ 3 ನೇ ಸ್ಥಾನದಲ್ಲಿದೆ. ಮಾದಕ ವ್ಯಸನ ಮಾನಸಿಕ ಅವಲಂಬತೆಗೆ ಕಾರಣವಾಗಿದ್ದು, ದೈಹಿಕ ಸಮಸ್ಯೆ ಜತೆಗೆ ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ಅಪ್ರಾಪ್ತ ವಯಸ್ಕರ ಆತ್ಮಹತ್ಯೆಯಲ್ಲಿ ಶೇ. 5 ರಿಂದ 7ರಷ್ಟು ಮಾದಕ ವ್ಯಸನದಿಂದ ಆಗುತ್ತಿವೆ ಎಂದರು.

    ಯುವ ಸಮುದಾಯ ಹೆಚ್ಚಾಗಿ ಮಾದಕ ವಸ್ತುಗಳ ಆಕರ್ಷಣೆಗೆ ಒಳಗಾಗುತ್ತಿದ್ದು, ಇದರಿಂದ ಮೆದುಳು ನಿಷ್ಕ್ರಿಯತೆ, ಪಾರ್ಶ್ವವಾಯು, ಹೃದಯಾಘಾತ, ಕ್ಯಾನ್ಸರ್, ಕ್ಷಯ ರೋಗದಂತಹ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇದು ಒಂದು ಕುಟುಂಬದ ಮೇಲೆ ದುಷ್ಪರಿಣಾಮ ಬೀರಿ ಆರ್ಥಿಕ ಸಂಕಷ್ಟ ಎದುರಾಗುವುದಲ್ಲದೆ ಸಮಾಜಕ್ಕೂ ಮಾರಕವಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಮಾದಕ ವಸ್ತುಗಳ ಬಗ್ಗೆ ಅರಿವು ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ.ಡಿ.ಸುನಿಲ್‌ಕುಮಾರ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎ.ವಾಸು, ಕಾರ್ಯದರ್ಶಿ ಸಿ.ಎನ್.ರಾಘವೇಂದ್ರ, ಎನ್‌ಎಸ್‌ಎಸ್ ಅಧಿಕಾರಿ ಸಿ.ಆರ್.ಶಿವಕುಮಾರ್, ನ್ಯಾಯಾಂಗ ತನಿಖೆಯ ಭಗವಾನ್ ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts