More

    ರೇಷ್ಮೆಗೂಡಿಗೆ ನೀಡುತ್ತಿರುವ ಪ್ರೋತ್ಸಾಹಧನ 10 ರೂ.ನಿಂದ 30 ರೂ.ಗೆ ಏರಿಕೆ: ಸಿಎಂ ಸಿದ್ದರಾಮಯ್ಯ ಘೋಷಣೆ

    ಬೆಂಗಳೂರು: ರೇಷ್ಮೆ ಬೆಳೆಗಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಬಂಪರ್​ ಕೊಡುಗೆ ಘೋಷಣೆ ಮಾಡಿದ್ದಾರೆ. ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ಪ್ರಸ್ತುತ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಕಿಲೋಗೆ 10 ರೂ.ನಿಂದ 30 ರೂ.ಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

    ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

    ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹಧನವನ್ನು ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ವಾರ್ಷಿಕ 12 ಕೋಟಿ ರೂ. ಒದಗಿಸಲಾಗುವುದು. ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ಪ್ರಸ್ತುತ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಕಿಲೋಗೆ 10 ರೂ.ನಿಂದ 30 ರೂ.ಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.

    ಕರ್ನಾಟಕ ಬಜೆಟ್ 2024: ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ನಿರ್ಧಾರ; ಸಿಎಂ ಘೋಷಣೆ

    ರಾಜ್ಯ ಬಜೆಟ್ 2024: ಮಾರುಕಟ್ಟೆಗಳ ಸಮಿತಿಗಳ ಡಿಜಿಟಲೈಸ್​ಗೆ 10 ಕೋಟಿ ರೂ., ಕೃಷಿಗೆ ಇನ್ನೇನು? ಇಲ್ಲಿದೆ ವಿವರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts