More

    ಹಿರಿಯ ನಾಗರಿಕರ ಮಾಸಾಶನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಭರವಸೆ

    ಬೆಂಗಳೂರು: ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ಈ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರ ಮಾಸಾಶನವನ್ನು ಮುಂದಿನ ಬಜೆಟ್‌ನಲ್ಲಿ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ, ಸಮಾರಂಭ ಉದ್ಘಾಟಿಸಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು.

    ಪ್ರಸ್ತುತ ಹಿರಿಯ ನಾಗರಿಕರಿಗೆ ಪ್ರತೀ ತಿಂಗಳು 1,200 ರೂ. ಮಾಸಾಶನ ನೀಡಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಿಸುವಂತೆ ಸಲಹೆಗಳು ಕೇಳಿಬಂದಿದೆ. ಮಾಸಾಶನ ಹೆಚ್ಚಿಸಲು ಸರ್ಕಾರ ಇಚ್ಛಿಸಿದ್ದರೂ, ಎಷ್ಟು ಪ್ರಮಾನದಲ್ಲಿ ಏರಿಕೆ ಮಾಡಲಾಗುತ್ತದೆ ಎಂಬುದನ್ನು ಮುಂದಿನ ಬಜೆಟ್‌ನಲ್ಲಿ ಘೋಷಿಸುವುದಾಗಿ ಸಿಎಂ ತಿಳಿಸಿದರು.

    ಪ್ರತಿಯೊಂದು ಮಗುವು ವಿಶ್ವಮಾನವನಾಗಿಯೇ ಭೂಮಿಗೆ ಬರುತ್ತದೆ. ಸಾಯುವಾಗ ಸಮಾಜದಿಂದ ಪ್ರಭಾವಿತರಾಗಿ ಬದಲಾವಣೆ ಕಾಣಬೇಕಾಗುತ್ತದೆ. ಇಂಥದ್ದೇ ಧರ್ಮದಲ್ಲಿ ಜನಿಸಬೇಕೆಂದು ಯಾರೂ ಅರ್ಜಿ ಹಾಕಿಕೊಳ್ಳುವುದಿಲ್ಲ. ಧರ್ಮ, ಜಾತಿ ಪದ್ಧತಿ ಅಸ್ತಿತ್ವದಲ್ಲಿರುವುದರಿಂದ ಅದರಲ್ಲಿ ಹುಟ್ಟಿ, ಅಲ್ಲಿನ ಪದ್ಧತಿಗಳನ್ನು ಆಚರಿಸುತ್ತೇವೆ. ಸಮಾಜದಲ್ಲಿ ಸಾಮರಸ್ಯದಿಂದ ಬಾಳ್ವೆ ನಡೆಸಬೇಕಿದೆ ಎಂದರು.

    ಜಿಲ್ಲೆಗೊಂದು ಹಿರಿಯ ಕಲ್ಯಾಣ ಕೇಂದ್ರ:

    ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಹಿರಿಯ ನಾಗರಿಕರಿಗೆ ಆರೋಗ್ಯ, ಆರೈಕೆ, ವಿಶ್ರಾಂತಿ ಸೌಲಭ್ಯ ಅಲ್ಲದೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿಯಾಗಲು ಒಂದೇ ಸೂರಿನಡಿ ವಿವಿಧ ಸವಲತ್ತು ಒಳಗೊಂಡ ‘ಹಿರಿಯ ಕಲ್ಯಾಣ ಕೇಂದ್ರ’ವನ್ನು ಜಿಲ್ಲೆಗೊಂದರಂತೆ ಸ್ಥಾಪಿಸುವ ಆಶಯ ಇದೆ. ಇದನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನ ಬಳಸಿಕೊಂಡು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

    ಇದೇ ವೇಳೆ ಸಚಿವೆಯು ಹಿರಿಯ ನಾಗರಿಕರಿಗೆ ನೀಡುತ್ತಿರುವ 1,200 ರೂ. ಮೊತ್ತದ ಮಾಸಾಶನವನ್ನು 2,000 ರೂ.ಗೆ ಹೆಚ್ಚಳ ಮಾಡುವಂತೆ ಮನವಿ ಮಾಡಿದರು.

    ಹಿರಿಯರಿಗೆ ಸನ್ಮಾನ:

    ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರಾದ ಪದ್ಮಶ್ರೀ ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕ ಎಚ್.ಎಸ್.ಗಿರಿರಾಜ್ ಅವರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts