ರಸ್ತೆ ಅಪಘಾತದಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳ

chim 17-2

ಚಿಮ್ಮಡ: ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಅಪಘಾತಗಳ ಸಂಖ್ಯೆ ತಗ್ಗಿಸಬಹುದಾಗಿದೆ ಎಂದು ಬನಹಟ್ಟಿ ಠಾಣಾಧಿಕಾರಿ ಶಾಂತಾ ಹಳ್ಳಿ ಹೇಳಿದರು.

ಸಮೀಪದ ಯರಗಟ್ಟಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಹಾಗೂ ಬನಹಟ್ಟಿ ಪೊಲೀಸ್ ಠಾಣೆ ಹಾಗೂ ಯರಗಟ್ಟಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ, ಸೈಬರ್ ಅಪರಾಧ ಹಾಗೂ ಫೋಕ್ಸೋ ಕುರಿತ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ರಸ್ತೆಗಳಲ್ಲಿ ಕಬ್ಬು ಸಾಗಿಸುವ ಟ್ರಾೃಕ್ಟರ್‌ಗಳ ಸಂಖ್ಯೆ ಗಣನೀಯವಾಗಿದ್ದು, ಅಪಾಯದ ಮಟ್ಟದಲ್ಲಿ ಸಾಗುತ್ತಿದ್ದರಿಂದ ಮಕ್ಕಳು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು. ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಚಾಲನಾ ಪರವಾನಗಿ ಹಾಗೂ ಅಗತ್ಯ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡಿರಬೇಕು ಎಂದರು.

ಪ್ರೌಢಶಾಲೆ ಸಹ ಶಿಕ್ಷಕರಾದ ಉತ್ತಮಕುಮಾರ ಮಗದುಮ್ ಪ್ರಾಸ್ತಾವಿಕವಾಗಿ ಮಾತನಾಡಿ, ಈ ವರ್ಷದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಪಡೆಯುವುದರ ಮೂಲಕ ಒಳ್ಳೆಯ ನಾಗರಿಕರಾಗಿ ಶಾಲೆಯ ಹಾಗೂ ಗ್ರಾಮದ ಕೀರ್ತಿ ಹೆಚ್ಚಿಸಬೇಕು ಎಂದರು.

ಪ್ರೌಢಶಾಲೆ ಪ್ರಭಾರಿ ಮುಖ್ಯಶಿಕ್ಷಕ ಐ.ಡಿ. ನದಾಫ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಎಂ.ಐ. ಚಿತ್ರಭಾನುಕೋಟಿ, ಎಸ್‌ಡಿಎಂಸಿ ಅಧ್ಯಕ್ಷ ಮಹಾದೇವ ಸನದಿ, ಬಸಪ್ಪ ಕಂಕಣವಾಡಿ ಇದ್ದರು. ಎಸ್.ಎಚ್. ರಾಮದುರ್ಗ ಸ್ವಾಗತಿಸಿ ನಿರೂಪಿಸಿದರು. ಆರ್.ವಿ. ಬಾಣಕಾರ ವಂದಿಸಿದರು.

ಶಿಕ್ಷಕರು, ಪಾಲಕರು, ಗ್ರಾಮಸ್ಥರು, ಗ್ರಾಪಂ ಸದಸ್ಯರು, ಎಸ್‌ಡಿಎಂಸಿ ಪದಾಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.

Share This Article

ರುಚಿಕರ ಟೊಮೆಟೊ ಹಪ್ಪಳ ಮಾಡುವುದೇಗೆ?; ಇಲ್ಲಿದೆ ಸಿಂಪಲ್​ ವಿಧಾನ | Recipe

ಭರ್ಜರಿ ಭೋಜನ ಹಪ್ಪಳ ಇಲ್ಲದಿದ್ದರೆ ಸಂಪೂರ್ಣ ಎಂದು ಎನ್ನಿಸುವುದಿಲ್ಲ. ಊಟದ ಎಲೆಯ ಸೌಂದರ್ಯವನ್ನು ಹೆಚ್ಚಿಸುತ್ತದೆ. ಈಗ…

ಸಿಹಿ ಮೊಸರು ಅಥವಾ ಉಪ್ಪುಸಹಿತ ಮೊಸರು; ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ | Health Tips

ಭಾರತದ ಪ್ರತಿಯೊಂದು ಮನೆಯಲ್ಲೂ ಮೊಸರನ್ನು ಸೇವಿಸಲಾಗುತ್ತದೆ. ಅದರ ಜೀರ್ಣಕಾರಿ ಪ್ರಯೋಜನಗಳು, ಆರೋಗ್ಯ ವರ್ಧಕ ಗುಣಗಳು ಮತ್ತು…

ಪಿರಿಯಡ್ಸ್​ನಲ್ಲಿ ಮಹಿಳೆಯರು ಈ 3 ಆಹಾರವನ್ನು ತಪ್ಪದೆ ಸೇವಿಸಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಆಹಾರ ಪದ್ಧತಿಗೆ ಸಂಬಂಧಿಸಿದ ತಪ್ಪು ಕಲ್ಪನೆಗಳನ್ನು ನಿವಾರಿಸುವಲ್ಲಿ ಮತ್ತು ಜನರಿಗೆ ಸರಿಯಾದ ಮಾಹಿತಿಯನ್ನು ನೀಡುವುದರಲ್ಲಿ ಅವರು…