More

    ಸನ್ಮಾರ್ಗದಿಂದ ಗೌರವ ವೃದ್ಧಿ

    ಸರಗೂರು: ಸನ್ಮಾರ್ಗದಲ್ಲಿ ಸಾಗಿದರೆ ಯಶಸ್ವಿ ಬದುಕಿನೊಂದಿಗೆ ಸಮಾಜದಲ್ಲಿನ ಗೌರವಕ್ಕೂ ಪಾತ್ರರಾಗಬಹುದು ಎಂದು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

    ತಾಲೂಕಿನ ಬಿಡುಗಲು ಪಡುವಲು ವಿರಕ್ತ ಮಠದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾಳ ಒಡೆಯ ಗುರುಗಳ ಆರಾಧನೆ ಮತ್ತು ವೀರಶೈವ ಲಿಂಗಾಯತ ವಧು-ವರರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸಾಮರಸ್ಯ ದಾಂಪತ್ಯದಿಂದ ಕುಟುಂಬದ ಏಳಿಗೆ ಸಾಧ್ಯ. ಶರಣರಾದ ಅಲ್ಲಮಪ್ರಭು ಹೇಳಿದಂತೆ ಉಭಯರ ದೃಷ್ಟಿಯಲ್ಲೂ ಏಕದೃಷ್ಟಿ ಬಿಂಬಿತವಾದಾಗ ಯಾವುದೇ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಬಹುದು, ದಾಂಪತ್ಯ ಜೀವನಕ್ಕೆ ಕಾಲಿರಿಸಿದವರು ಈ ವಿಚಾರವನ್ನು ಆರ್ಥ ಮಾಡಿಕೊಳ್ಳಬೇಕು ಎಂದರು.
    ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳೊಂದಿಗೆ ಮಠ-ಮಾನ್ಯಗಳು ಸಾಮಾಜಿಕ ಸೇವಾ ಕಾರ್ಯಗಳಿಗೂ ಹೆಚ್ಚು ಆದ್ಯತೆ ನೀಡುತ್ತವೆ. ಯೋಗ, ಧ್ಯಾನ ಹಾಗೂ ಪ್ರಾಣಾಯಾಮಗಳಿಂದ ಮನಃಶಾಂತಿ ಹಾಗೂ ಆರೋಗ್ಯ ಸುಧಾರಿಸುತ್ತದೆ ಎಂದರು.

    ಬೆಟ್ಟದಪುರ ಮಠದ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ ಮಾತನಾಡಿ, ಮೂಢ ನಂಬಿಕೆ ಬಿಡಬೇಕು, ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ ಸಾಮೂಹಿಕ ವಿವಾಹಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.

    ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಮಠದ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಬಿಡಗಲು ಪಡುವಲ ವಿರಕ್ತ ಮಠದ ಮಹದೇವಸ್ವಾಮಿ, ದೇವನೂರು ಮಠದ ಮಹಾಂತ ಸ್ವಾಮೀಜಿ, ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಿದರು. ಹಂಚೀಪುರ ಮಠದ ತೋಂಟದಾರ್ಯ ಸ್ವಾಮೀಜಿ, ಪುರ ಮಠದ ಚಂದ್ರಶೇಖರ ಸ್ವಾಮೀಜಿ, ಮಾದಾಪುರ ಮಠದ ಮಲ್ಲಿಕಾರ್ಜನ ಸ್ವಾಮೀಜಿ, ಸಾಮಾಜಿಕ ಕಾರ್ಯಕರ್ತ ಯು.ಎಸ್.ಶೇಖರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts