More

    ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚಿಸಿ

    ಸಾಗರ: ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನ ನಮ್ಮ ತಾಲೂಕಿನಲ್ಲಿ ಆಗಬೇಕು. ಇದಕ್ಕಾಗಿ ಸ್ವೀಪ್ ಸಮಿತಿಯಿಂದ ನಿರಂತರವಾಗಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಹಸೀಲ್ದಾರ್ ಸೈಯದ್ ಕಲೀಂವುಲ್ಲಾ ಹೇಳಿದರು.
    ತಾಲೂಕು ಆಡಳಿತದಿಂದ ಮಂಗಳವಾರ ಸಾಗರ ಹೋಟೆಲ್ ವೃತ್ತದಲ್ಲಿ ಸ್ವೀಪ್ ಸಮಿತಿ ಏರ್ಪಡಿಸಿದ್ದ ಬೈಕ್ ರ‌್ಯಾಲಿ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
    ನಗರ ಮತ್ತು ಗ್ರಾಮೀಣ ಪ್ರದೇಶಕ್ಕೆ ಹೋಲಿಕೆ ಮಾಡಿದಾಗ ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಕಡಿಮೆ ಇರುತ್ತದೆ. ಈ ಹಿನ್ನೆಲೆಯಲ್ಲಿ ನಗರ ಪ್ರದೇಶದ ಜನರಲ್ಲಿ ಜಾಗೃತಿ ಮೂಡಿಸಲು ಬೈಕ್ ರ‌್ಯಾಲಿ ಏರ್ಪಡಿಸಲಾಗಿದೆ. ಅತಿಹೆಚ್ಚು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯವನ್ನು ಹೆಚ್ಚಿಸಬೇಕು ಎಂದರು.
    ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತ ಎಚ್.ಕೆ.ನಾಗಪ್ಪ ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯ ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲಿದೆ. ಮತದಾನದ ಮೂಲಕ ನಮ್ಮ ಜವಾಬ್ದಾರಿ ನಿಭಾಯಿಸಬೇಕಾಗಿದೆ. ಮತದಾನ ನಮ್ಮ ಹಕ್ಕು ಎನ್ನುವುದನ್ನು ಅರಿತು ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
    ಸಾಗರ ತಾಪಂ ಕಾರ್ಯನಿರ್ವಾಹಣಾಧಿಕಾರಿ ಸುನಿತಾ, ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಚುನಾವಣೆ ವಿಭಾಗದ ರ್ನಾಂಡಿಸ್, ತಾಪಂ ಸಹಾಯಕ ಕಾರ್ಯಪಾಲಕ ಅಭಿಯಂತ ಮಹ್ಮದ್ ಹನ್ೀ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts