More

  ಹುಬ್ಬಳ್ಳಿ ರೈಲ್ವೆ ವಿಭಾಗ ವ್ಯಾಪ್ತಿಯಲ್ಲಿ ಭದ್ರತೆ ಹೆಚ್ಚಳ

  ಹುಬ್ಬಳ್ಳಿ : ಇತ್ತೀಚೆಗೆ ಸಂಭವಿಸಿದ ಹಲವು ಘಟನೆಗಳ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗ ವ್ಯಾಪ್ತಿಯ ರೈಲುಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ.

  ರೈಲ್ವೆ ಭದ್ರತಾ ದಳ ಹಾಗೂ ರಾಜ್ಯ ರೈಲ್ವೆ ಪೊಲಿಸರನ್ನು ಒಳಗೊಂಡ ತಂಡಗಳು ಹುಬ್ಬಳ್ಳಿ ರೈಲ್ವೆ ವಿಭಾಗದಿಂದ ನಿತ್ಯ ಸಂಚರಿಸುವ 20ಕ್ಕೂ ಹೆಚ್ಚು ಪ್ರಮುಖ ರೈಲುಗಳಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

  ಪ್ರಯಾಣಿಕರ ಭದ್ರತೆಗೆ ಸಂಬಂಧಿಸಿದಂತೆ ಕೇಳಿಬರುವ ಸಮಸ್ಯೆಗಳಿಗೆ ಈ ತಂಡ ತುರ್ತಾಗಿ ಸ್ಪಂದಿಸಲಿದೆ. ರೈಲ್ವೆ ಭದ್ರತಾ ದಳದಿಂದ ಹೆಚ್ಚುವರಿಯಾಗಿ 12 ರೈಲುಗಳಿಗೂ ಭದ್ರತೆ ಒದಗಿಸಲಾಗುತ್ತಿದೆ. ಪ್ರಯಾಣಿಕರ ಪ್ರಯಾಣದ ಟಿಕೆಟ್ ಪರೀಕ್ಷೆ ಹಾಗೂ ಇನ್ನಿತರ ಕಾರ್ಯಗಳಲ್ಲಿ ಈ ತಂಡ ನಿರತವಾಗಿದೆ. ಹುಬ್ಬಳ್ಳಿ, ಬೆಳಗಾವಿ, ಬಳ್ಳಾರಿ, ವಿಜಯಪುರ, ಗದಗ, ಹೊಸಪೇಟೆ, ವಾಸ್ಕೊ ಮತ್ತು ಧಾರವಾಡ ರೈಲು ನಿಲ್ದಾಣಗಳಲ್ಲಿ ಮತ್ತಷ್ಟು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಕಂಟ್ರೋಲ್ ರೂಮ್ಂದ ದಿನದ 24 ತಾಸು ನಿಗಾ ವಹಿಸಲಾಗುತ್ತಿದೆ.

  ರೈಲು ನಿಲ್ದಾಣಗಳಲ್ಲಿ ಹಾಗೂ ರೈಲುಗಳಲ್ಲಿ ಕೇಳಿಬರುವ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಲಾಗುತ್ತಿದೆ. ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಗೆ ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರು ಪ್ರಾಧಾನ್ಯತೆ ನೀಡುತ್ತಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts