More

    ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಪೂರಕವಾದ ವಾತಾವರಣ ನಿರ್ಮಿಸಲು ಕರೆ

    ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಪೂರಕವಾದ ವಾತಾವರಣ ನಿರ್ಮಾಣ, ಕ್ರಿಯಾಶೀಲ ಚಟುವಟಿಕೆ ಮತ್ತು ಜಾಗೃತಿಗೆ ಮುಂದಾಗಲು ಶಾಲಾ ಮುಖ್ಯ ಶಿಕ್ಷಕರುಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಬೈಲಾಂಜನಪ್ಪ ಸೂಚಿಸಿದ್ದಾರೆ.
    ಶಿಡ್ಲಘಟ್ಟ ನಗರದಲ್ಲಿನ ಬಿಜಿಎಸ್ ಶಾಲೆಯಲ್ಲಿ ಕೈಗೊಂಡಿದ್ದ ೨೦೨೪-೨೫ನೇ ಸಾಲಿನ ಶೈಕ್ಷಣಿಕ ವರ್ಷದ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಯ ಬಗ್ಗೆ ಮುಖ್ಯ ಶಿಕ್ಷಕರ ತರಬೇತಿ ಸಭೆಯಲ್ಲಿ ಸಲಹೆ ಸೂಚನೆಗಳನ್ನು ನೀಡಿದರು.
    ಸರ್ಕಾರವು ಶಾಲೆಗಳಿಗೆ ನುರಿತ ಶಿಕ್ಷಕರ ನೇಮಕ ಸೇರಿದಂತೆ ಎಲ್ಲ ರೀತಿಯ ಸವಲತ್ತುಗಳನ್ನು ನೀಡುತ್ತಿದ್ದರೂ ಮಕ್ಕಳ ದಾಖಲಾತಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಇದರ ಬಗ್ಗೆ ಅಧಿಕಾರಿಗಳು ಮತ್ತು ಶಿಕ್ಷಕರು ಮನನ ಮಾಡಿಕೊಳ್ಳಬೇಕೆಂದರು.
    ಶೈಕ್ಷಣಿಕ ಕ್ರಿಯಾ ಯೋಜನೆ ಪಟ್ಟಿ ತಯಾರಿಕೆ, ಸಮಯ ಪಾಲನೆ, ಮಕ್ಕಳ ಪೋಷಕರೊಂದಿಗೆ ಸಮನ್ವಯತೆ, ಇಲಾಖೆಯ ನೀತಿ ನಿಯಮಗಳ ಪಾಲನೆ, ತರಬೇತಿ ಸೇರಿದಂತೆ ಇತರ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಶಾಲಾ ಆರಂಭಕ್ಕೂ ಮುನ್ನಾ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು.
    ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ಸಮನ್ವಯಾಧಿಕಾರಿ ತ್ಯಾಗರಾಜ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಬಿಆರ್‌ಪಿ, ಸಿಆರ್‌ಪಿಗಳು, ಮುಖ್ಯ ಶಿಕ್ಷಕರು ಸಲಹೆಗಳನ್ನು ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts