More

    ಸಮಾಜದಲ್ಲಿ ಹೆಚ್ಚುತ್ತಿರುವ ಓಲೈಸುವವರ ಸಂಖ್ಯೆ

    ಕೆ.ಆರ್.ಪೇಟೆ: ಸ್ವಾರ್ಥ ಸಮಾಜದಲ್ಲಿ ಹಣ, ಆಸ್ತಿ ಮತ್ತು ಅಧಿಕಾರ ಹೊಂದಿರುವ ಜನರನ್ನು ಓಲೈಸುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ನಿವೃತ್ತ ಲೋಕಾಯುಕ್ತ ಎನ್.ಸಂತೋಷ್ ಹೆಗಡೆ ಬೇಸರ ವ್ಯಕ್ತಪಡಿಸಿದರು.

    ತಾಲೂಕಿನ ಮಾರ್ಗೋನಹಳ್ಳಿಯ ಮರಡಿಲಿಂಗೇಶ್ವರ ಕ್ಷೇತ್ರದಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.

    ಸಮಾಜದಲ್ಲಿ ಬದಲಾವಣೆ ಆಗಬೇಕಾದರೆ ಯುವಜನರು ಹಾಗೂ ವಿದ್ಯಾರ್ಥಿಗಳು ದೃಢ ಸಂಕಲ್ಪ ಮಾಡಬೇಕು. ಆ ಮೂಲಕ ಅನ್ಯಾಯ ಮತ್ತು ಅಕ್ರಮಗಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕು. ಆಗ ಮಾತ್ರ ನಾವು ಏನನ್ನದರೂ ನಿರೀಕ್ಷಿಸಲು ಸಾಧ್ಯ ಎಂದರು.

    ಮನುಷ್ಯನ ದುರಾಸೆ ಹಾಗೂ ಸ್ವಾರ್ಥದಿಂದಾಗಿ ಸಮಾಜದಲ್ಲಿ ನೈತಿಕ ಮೌಲ್ಯ ಕುಸಿಯುವುದರೊಂದಿಗೆ ರಾಷ್ಟ್ರದ ಅಭಿವೃದ್ಧಿ ಹಳ್ಳ ಹಿಡಿಯುತ್ತಿದೆ. ಜೈಲಿಗೆ ಹೋಗಿ ಬಂದವರನ್ನು ಸನ್ಮಾನಿಸುವುದು ಸಾಮಾನ್ಯವಾಗಿದೆ. ಕಷ್ಟಪಟ್ಟು ದುಡಿದು ಜೀವನ ನಡೆಸದಿವುದು ಎಷ್ಟರ ಮಟ್ಟಿಗೆ ಸರಿ ಎಂದು ಆತ್ಮವಲೋಕನ ಮಾಡಿಕೊಳ್ಳಬೇಕಗಿದೆ ಎಂದು ಹೇಳಿದರು.

    ನಾವು ಬದಲಾಗದಿದ್ದರೆ ನಮ್ಮ ದೇಶಕ್ಕೆ ಉಳಿಗಾಲವಿಲ್ಲ ಎಂಬ ಸತ್ಯ ಅರಿತು ಬದಲಾವಣೆ ದಿಕ್ಕಿನಲ್ಲಿ ಸಾಗಬೇಕು. ಈ ದಿಕ್ಕಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ಮನಸ್ಸು ಮಾಡಿ ನಿಂತರೆ ಸಾಕು ಎಂದರು.

    ಶಾಲೆ ಪ್ರಾಂಶುಪಾಲ ಎಲ್.ಮಲ್ಲಿಕಾರ್ಜುನಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರುದ್ರಮುನಿ ಸ್ವಾಮೀಜಿ, ಶಿಕ್ಷಕ ಕೆ.ಎಸ್.ಚಂದ್ರು, ನಿಲಯ ಪಾಲಕ ಪ್ರದೀಪ್, ಪೋಷಕ ಶಿಕ್ಷಕ ಪರಿಷತ್ ಸದಸ್ಯರಾದ ಚೌಡೇನಹಳ್ಳಿ ಸತೀಶ್, ಹಿರಿಕಳಲೆ ಯೋಗೇಶ್, ಹೊಸ ಮಾವಿನಕೆರೆ ಮಹೇಶ್, ಆಲೇನಹಳ್ಳಿ ದೊರೆರಾಜು, ಕುರುಬಹಳ್ಳಿ ಜಯೇಶ್,ರಾಮನಹಳ್ಳಿ ಕುಮಾರ್, ಬಳ್ಳೇಕೆರೆ ಶಂಕರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts