More

    ಕಾರ್ವಿುಕರ ಕೆಲಸದ ಅವಧಿ ಹೆಚ್ಚಿಸಿರುವ ಕ್ರಮ ಸರಿಯಲ್ಲ: ಹೈಕೋರ್ಟ್

    ಬೆಂಗಳೂರು: ಕೋವಿಡ್-19 ಪರಿಸ್ಥಿತಿಯನ್ನು ‘ಸಾರ್ವಜನಿಕ ತುರ್ತು ಪರಿಸ್ಥಿತಿ’ ಎಂದು ಪರಿಗಣಿಸಿ ಕೈಗಾರಿಕೆಗಳ ಕಾಯ್ದೆಯ ಸೆಕ್ಷನ್ 5ರ ಅನ್ವಯ ಕಾರ್ವಿುಕರ ಕೆಲಸದ ಅವಧಿ ಹೆಚ್ಚಿಸಿರುವ ಸರ್ಕಾರದ ಕ್ರಮ ಒಪ್ಪಲಾಗದು ಎಂದು ಹೈಕೋರ್ಟ್ ಹೇಳಿದೆ. ಸರ್ಕಾರ ಹೊಸದಾಗಿ ನಿರ್ಧಾರ ಕೈಗೊಳ್ಳದಿದ್ದರೆ ಕೆಲಸದ ಅವಧಿ ಹೆಚ್ಚಿಸಿರುವ ಅಧಿಸೂಚನೆಗೆ ತಡೆಯಾಜ್ಞೆ ನೀಡುವುದಾಗಿ ತಿಳಿಸಿದೆ.

    ಕಾರ್ವಿುಕರ ಪ್ರತಿ ದಿನದ ಕೆಲಸದ ಅವಧಿಯನ್ನು 10 ತಾಸುಗಳವರೆಗೆ ಹೆಚ್ಚಿಸಿ ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಲು ಕೋರಿ ಮಾರುತಿ ಎಂಬುವರು ಸಲ್ಲಿಸಿರುವ ಪಿಐಎಲ್ ಅನ್ನು ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು. ಕೈಗಾರಿಕೆಗಳ ಕಾಯ್ದೆಯ ಸೆಕ್ಷನ್ 5 ಉಲ್ಲೇಖಿಸಿ ಕಾರ್ವಿುಕರ ಪ್ರತಿ ದಿನದ ಕೆಲಸದ ಅವಧಿಯನ್ನು ಸರ್ಕಾರ ಹೆಚ್ಚಿಸಿದೆ. ಸೆಕ್ಷನ್ 5ರ ಪ್ರಕಾರ ಹೊರಗಿನ ಆಕ್ರಮಣ ಮತ್ತು ಆಂತರಿಕ ಸಮಸ್ಯೆಗಳಿಂದ ದೇಶದ ಭದ್ರತೆಗೆ ತೊಂದರೆಯಾದಾಗ ಮಾತ್ರ ಇಂತಹ ತೀರ್ಮಾನ ಕೈಗೊಳ್ಳಲು ಅವಕಾಶವಿದೆ ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್, ಶುಕ್ರವಾರದೊಳಗೆ ಹೊಸದಾಗಿ ತೀರ್ಮಾನ ತೆಗೆದುಕೊಳ್ಳದಿದ್ದರೆ, ಅಧಿಸೂಚನೆಗೆ ತಡೆಯಾಜ್ಞೆ ನೀಡಲಾಗುವುದು ಎಂದು ತಿಳಿಸಿತು.

    ಇದನ್ನೂ ಓದಿ: ಕೆಂಪೇಗೌಡ ಲೇಔಟ್​ ಸೈಟ್​ ತಗೊಂಡಿದ್ದೀರಾ? ಹಾಗಾದ್ರೆ ನಿಮ್ ಕೈಲಿರೋ ಹಕ್ಕುಪತ್ರ ಚೆಕ್​ ಮಾಡ್ಕೊಳ್ಳಿ..

    ಅರ್ಜಿದಾರರ ಮನವಿ ಏನು?: ಕಾರ್ಖಾನೆಗಳ ಕಾಯ್ದೆ-1984ರ ಸೆಕ್ಷನ್ 51 ಮತ್ತು 54ರಿಂದ ಎಲ್ಲಾ ಕಾರ್ಖಾನೆಗಳಿಗೆ ವಿನಾಯಿತಿ ನೀಡಿ ಮೇ 22ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯ ಪರಿಣಾಮ ಕಾರ್ವಿುಕರ ಪ್ರತಿ ದಿನದ ಕೆಲಸದ ಅವಧಿ 9 ತಾಸು ಮತ್ತು 10 ತಾಸು ಹಾಗೂ ವಾರದ ಕೆಲಸದ ಅವಧಿ 48 ಗಂಟೆಗಳಿಂದ 60 ಗಂಟೆಗಳಿಗೆ ಹೆಚ್ಚಿಸಲಾಗಿದೆ. ಆದ್ದರಿಂದ, ಸರ್ಕಾರದ ಅಧಿಸೂಚನೆ ರದ್ದುಪಡಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

    ಶಾಕಿಂಗ್ ನ್ಯೂಸ್! ಬಹುತೇಕ ಭಾರತೀಯರನ್ನು ಕಾಡಲಿದೆ ಕಡುಬಡತನ ಎನ್ನುತ್ತಿದೆ ಅಧ್ಯಯನ ವರದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts