More

    ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಬೆಳೆಸಿ

    ಬಾಳೆಹೊನ್ನೂರು: ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ವಿದ್ಯಾರ್ಥಿ ದೆಸೆಯಲ್ಲಿಯೇ ಬೆಳೆದು ಬರಬೇಕು ಎಂದು ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಎಂ.ಸಿ.ಯೋಗೀಶ್ ಹೇಳಿದರು.
    ಹಿರೇಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಾರದಾ ಪೂಜೆ ಹಾಗೂ ರೋಟರಿ ಕ್ಲಬ್‌ನ ಸೇವಾ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಯುವಜನರಲ್ಲಿ, ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಕಳೆದುಹೋಗುತ್ತಿದೆ. ಹಿರಿಯರು ಅವುಗಳನ್ನು ಹೇಳಿಕೊಡುವ ಕೆಲಸವಾಗಬೇಕಿದೆ. ಯುವ ಜನರು ನೈತಿಕ ಅಧಃಪತನ ಹೊಂದುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣದ ಕುರಿತು ತರಬೇತಿ ನೀಡಬೇಕಿದೆ ಎಂದರು.
    ರೋಟರಿ ಕ್ಲಬ್ ಅಧ್ಯಕ್ಷ ಎ.ಆರ್.ಸುರೇಂದ್ರ ಮಾತನಾಡಿ, ರೋಟರಿ ಸಂಸ್ಥೆ ಗ್ರಾಮೀಣ ಭಾಗದ ಶಾಲಾ ಕಾಲೇಜುಗಳನ್ನು ಗುರಿಯಾಗಿರಿಸಿಕೊಂಡು ಕಾರ್ಯಕ್ರಮಗಳನ್ನು ನಡೆಸುತ್ತಿದೆ. ರೋಟರಿ ಸಂಸ್ಥೆ ಜಿಲ್ಲಾ ಗವರ್ನರ್ ಆಶಯದಂತೆ ಪ್ರತಿಯೊಂದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಕುರಿತು ಪರಿಣಾಮಕಾರಿ ತರಬೇತಿ ನೀಡಿಲಾಗುತ್ತಿದೆ ಎಂದು ಹೇಳಿದರು.
    ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಎಂ.ಸಿ.ಯೋಗೀಶ್ ಸರ್ಕಾರಿ ಶಾಲೆಗೆ ಅಗತ್ಯವಿದ್ದ ಚೇರ್‌ಗಳನ್ನು ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ರೇಖಾ, ಮುಖ್ಯಶಿಕ್ಷಕಿ ಪ್ರಭಾವತಿ, ಸಿಆರ್‌ಪಿ ಗಾಯತ್ರಿ, ರೋಟರಿ ಕಾರ್ಯದರ್ಶಿ ಯಶವಂತ, ಸದಸ್ಯ ಸುಧಾಕರ, ಶಿಕ್ಷಕರಾದ ಮಹೇಶ್, ದಿವ್ಯ, ಪ್ರಜ್ಞಾ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts