More

    IND vs AFG: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ47 ರನ್ ಭರ್ಜರಿ ಜಯ!

    ಬ್ರಿಜ್​ಟೌನ್​ (ವೆಸ್ಟ್​ ಇಂಡೀಸ್​): ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಸೂಪರ್ 8 ಸುತ್ತಿನ ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್​​ಗಳ ಭರ್ಜರಿ ಜಯ ಸಾಧಿಸಿದೆ.

    ಇದನ್ನೂ ಓದಿ: ಲೋಕಸಭೆ ವಿರೋಧ ಪಕ್ಷದ ನಾಯಕ ಯಾರಾಗಬೇಕೆಂದು ಕಾಂಗ್ರೆಸ್​ ನಿರ್ಧರಿಸುತ್ತೆ: ಶರದ್​ ಪವಾರ್

    ಈ ಮೂಲಕ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸತತ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಬ್ಯಾಟಿಂಗ್​ ಹಾಗೂ ಬೌಲಿಂಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತ ತಂಡ ಆಫಘಾನಿಸ್ತಾನ ತಂಡದ ವಿರುದ್ಧ ಸುಲಭ ವಿಜಯ ತನ್ನದಾಗಿಸಿಕೊಂಡಿತು.

    ಸೂರ್ಯಕುಮಾರ್ ಯಾದವ್​ (53 ರನ್​, 28 ಎಸೆತ, 5 ಫೊರ್, 3 ಸಿಕ್ಸರ್) ಹಾಗೂ ಜಸ್​ಪ್ರಿತ್ ಬುಮ್ರಾ (3 ವಿಕೆಟ್​, 4 ಓವರ್​, 7 ರನ್​) ಬಾರತ ತಂಡದ ಗೆಲುವಿನ ರೂವಾರಿಗಳೆನಿಸಿಕೊಂಡರು. ಭಾರತ ತಂಡ ಸೂಪರ್ 8 ಹಂತದ ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ ಹಾಗೂ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

    ಇಲ್ಲಿನ ಕೆನ್ಸಿಂಗ್ಟನ್​ ಓವಲ್​ ಕ್ರಿಕೆಟ್​ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 181 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಅಫ್ಘಾನಿಸ್ತಾನ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 134 ರನ್ ಬಾರಿಸಿ ಆಲ್​ಔಟ್​ ಆಗಿ 47 ರನ್​ಗಳ ಸೋಲಿಗೆ ಒಳಗಾಯಿತು.

    ಶಿವಮೊಗ್ಗ: ಹಸಗೂಸನ್ನು ತೋಟದಲ್ಲಿ ಎಸೆದು ಹೋದ ತಾಯಿ!

    See also  ರಿಷಿ ಸುನಕ್​ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ ಹೇಳಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts