More

    ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ 65ಕ್ಕೆ ಆಲೌಟ್; ವೈರಲ್​ ಆಗುತ್ತಿದೆ ಆಸ್ಟ್ರೇಲಿಯಾ ಆಟಗಾರನ ಭವಿಷ್ಯವಾಣಿ

    ಅಹಮದಾಬಾದ್: ಭಾನುವಾರ ಅಹಮದಾಬಾದಿನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಸೆಣಸಾಡಲಿದ್ದು, ಎರಡು ತಂಡಗಳಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಆದರೆ, ಪಂದ್ಯ ಶುರುವಾಗುವುದಕಲ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ಸ್ಟಾರ್​ ಆಟಗಾರ ಮಿಚೆಲ್​ ಮಾರ್ಷ್​ ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

    ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡ ಫೈನಲ್​ಗೆ ಪ್ರವೇಶ ಪಡೆಯುತ್ತಿದ್ದಂತೆ ಮಿಚೆಲ್‌ ಮಾರ್ಷ್‌ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೈನಲ್​​ ಪಂದ್ಯದಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ತಂಡ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುವುದಾಗಿ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    2023ರಲ್ಲಿ ನಡೆದ ಐಪಿಎಲ್​ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಪ್ರತಿನಿಧಿಸಿದ್ದ ಮಿಚೆಲ್​ ಮಾರ್ಷ್​ ಪಾಡ್​ಕಾಸ್ಟ್​​ನಲ್ಲಿ ಭಾಗವಹಿಸಿದ್ದರು. ಮುಂಬರುವ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ಭಾರತವನ್ನು ಸೋಲಿಸುತ್ತದೆ. ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ 2 ವಿಕೆಟ್​ ನಷ್ಟಕ್ಕೆ 450 ರನ್​​ ಗಳಿಸಲಿದೆ. ಭಾರತ 65 ರನ್​​ಗಳಿಗೆ ಆಲ್‌ಔಟ್​ ಆಗಲಿದೆ’ ಎಂದು ಮಿಚೆಲ್‌ ಮಾರ್ಷ್‌ ಅವರು ಭವಿಷ್ಯ ನುಡಿದಿದ್ದರು. 

    ಇದನ್ನೂ ಓದಿ: ಭಾರತ ವಿಶ್ವಕಪ್ ಗೆದ್ದರೆ ಬೀಚ್​ನಲ್ಲಿ ಬೆತ್ತಲಾಗಿ ಓಡಾಡುತ್ತೇನೆಂದ ನಟಿ!

    ಭಾರತ ತಂಡ ಪ್ರಸ್ತುತ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದೆ. ನಾವು ಅವರನ್ನು ಫೈನಲ್​ನಲ್ಲಿ ಎದುರಿಸಲಿದ್ದೇವೆ. ಫೈನಲ್​​ ಪಂದ್ಯದಲ್ಲಿ ನಮ್ಮನ್ನು ನಾವು ಕೊಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಎರಡು ತಂಡಗಳಿಗೂ ವಿಶ್ವಕಪ್​​ ತುಂಬಾ ಮುಖ್ಯ. ಹಾಗಾಗಿ ಉತ್ತಮ ಪ್ರದರ್ಶನ ನೀಡಲಿದ್ದೇವೆ ಎಂದು ಮಿಚೆಲ್​ ಮಾರ್ಷ್​ ಪಾಡ್​ಕಾಸ್ಟ್​ನಲ್ಲಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವಯರಲ್​ ಆಗಿದೆ.

    ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಆಡಿರುವ 10 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿ ಅಜೇಯವಾಗಿ ಫೈನಲ್​ ಪ್ರವೇಶಿಸಿರುವ ಟೀಂ ಇಂಡಿಯಾ ಭಾನುವಾರ ನಡೆಯಲಿರುವ ಫಿನಾಲೆಯಲ್ಲಿ ತನ್ನ ಗೆಲುವಿನ ಓಟವನ್ನು ವಿಸ್ತರಿಸಲು ಯೋಜನೆ ಹಾಕಿಕೊಂಡಿದೆ. ಆ ಮೂಲಕ ಆಸ್ಟ್ರೇಲಿಯಾ ವಿರುದ್ಧ 2003ರ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳಲು ರೋಹಿತ್​ ಶರ್ಮಾ ಪಡೆ ಭರ್ಜರಿ ತಯಾರಿ ನಡೆಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts