IND vs PAK : ವಿಶ್ವ ಕ್ರಿಕೆಟ್‌ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕಿರುವ ಕ್ರೇಜ್ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳು ಈ ಸಾಂಪ್ರದಾಯಿಕ ಎದುರಾಳಿಗಳ ಹಣಾಹಣಿಗಾಗಿ ಕಾತರದಿಂದ ಕಾಯುತ್ತಿರುತ್ತಾರೆ. ಈ ಎರಡೂ ತಂಡಗಳು ಎಲ್ಲಿಗೇ ಹೋದರೂ, ಕ್ರೀಡಾಂಗಣ ಮಾತ್ರ ಪ್ರೇಕ್ಷಕರಿಂದ ತುಂಬಿ ತುಳುಕುತ್ತಿರುತ್ತದೆ. ಈ ಹಳೆಯ ಪ್ರತಿಸ್ಪರ್ಧಿಗಳು ಇದೀಗ ಮತ್ತೊಮ್ಮೆ ಅಭಿಮಾನಿಗಳನ್ನು ರಂಜಿಸಲು ಸಿದ್ಧರಾಗಿದ್ದಾರೆ.
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ಮತ್ತು ಭಾರತ ಮುಖಾಮುಖಿಯಾಗಲಿವೆ. ಫೆಬ್ರವರಿ 23ರಂದು ನಡೆಯುವ ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ವೇದಿಕೆಯಾಗಲಿದೆ. ಈ ಕ್ರೇಜ್ ಅನ್ನೇ ಬಂಡವಾಳ ಮಾಡಿಕೊಂಡಿರುವ ಬ್ಲ್ಯಾಕ್ ಮಾರ್ಕೆಟ್ಗಳು ಅದರ ಲಾಭ ಮಾಡಿಕೊಳ್ಳುತ್ತಿವೆ. ಅಧಿಕೃತವಾಗಿ ಟಿಕೆಟ್ ಪಡೆಯಲು ಸಾಧ್ಯವಾಗದ ಅಭಿಮಾನಿಗಳು ಬ್ಲ್ಯಾಕ್ ಮಾರ್ಕೆಟ್ ಆಶ್ರಯಿಸುತ್ತಿರುವಂತೆ ಕಾಣುತ್ತಿದೆ.
ಬ್ಲ್ಯಾಕ್ ಮಾರ್ಕೆಟ್ನಲ್ಲಿ ಗ್ರ್ಯಾಂಡ್ ಲೌಂಜ್ ಟಿಕೆಟ್‌ನ ಬೆಲೆ 4 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿದೆ. ಆದರೆ, ಐಸಿಸಿ ಈ ಟಿಕೆಟ್‌ನ ಬೆಲೆಯನ್ನು 5,000 ದಿರ್ಹಮ್‌ಗಳಿಗೆ (1,18,240 ರೂಪಾಯಿ) ನಿಗದಿಪಡಿಸಿದೆ. ಆದರೆ, ಈಗ ಕಪ್ಪು ಮಾರುಕಟ್ಟೆಯಲ್ಲಿ ಕೆಲವು ವೆಬ್‌ಸೈಟ್‌ಗಳು ಇದನ್ನು ಮೂಲ ಬೆಲೆಗಿಂತ ಮೂರು ಪಟ್ಟು ಹೆಚ್ಚು ಮಾರಾಟ ಮಾಡುತ್ತಿವೆ. ನೆಟ್ಟಿಗರು ಇದರ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಮಹಾ ಶಿವರಾತ್ರಿಯಂದು ಬುಧ ಸಂಕ್ರಮಣ: ಈ 5 ರಾಶಿವರಿಗೆ ಅದೃಷ್ಟವೋ ಅದೃಷ್ಟ, ಧನ ಲಾಭ! Zodiac Signs
ಅಂದಹಾಗೆ ಈ ಮೆಗಾ ಟೂರ್ನಮೆಂಟ್‌ಗಾಗಿ ರೋಹಿತ್ ನೇತೃತ್ವದ ಭಾರತೀಯ ತಂಡ ಈಗಾಗಲೇ ದುಬೈಗೆ ಆಗಮಿಸಿದೆ. ಭಾರತ ಕೂಡ ಭಾನುವಾರದಿಂದ ಅಭ್ಯಾಸ ಆರಂಭಿಸಿದೆ. ಫೆಬ್ರವರಿ 20 ರಂದು ದುಬೈನಲ್ಲಿ ನಡೆಯುವ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶವನ್ನು ಎದುರಿಸಲಿದೆ. ಬಾಂಗ್ಲಾದೇಶ ತಂಡ ಕೂಡ ದುಬೈ ತಲುಪಿದೆ. ಭಾರತ ಈ ಪಂದ್ಯವನ್ನು ಗೆದ್ದು ಟೂರ್ನಿಯಲ್ಲಿ ಉತ್ತಮ ಆರಂಭ ಪಡೆಯುವ ಆಶಯವನ್ನು ಹೊಂದಿದೆ. ಆದಾಗ್ಯೂ, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಗಾಯದ ಕಾರಣದಿಂದಾಗಿ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ವೇಗಿ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಅದೇ ರೀತಿ, ಯಶಸ್ವಿ ಜೈಸ್ವಾಲ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದ್ದು, ಸ್ಪಿನ್ನರ್ ವರುಣ್ ಚಕ್ರವರ್ತಿಗೆ ಅವಕಾಶ ನೀಡಲಾಗಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಭಾರತೀಯ ತಂಡ
ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ. (ಏಜೆನ್ಸೀಸ್)
5 ಸಾವಿರ ವರ್ಷಗಳೇ ಕಳೆದ್ರೂ ಈಜಿಪ್ಟಿಯನ್ ಮಮ್ಮಿಗಳು ಕೊಳೆತಿಲ್ಲ ಏಕೆ? ಅಚ್ಚರಿ ಕಾರಣ ಇಲ್ಲಿದೆ… Egyptian Mummies