ಬಾರ್ಬಡೋಸ್: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಇದೀಗ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆಯುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಕಾದಾಟ ನಡೆಸಲಿವೆ. ಈ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದಿರುವ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: T20 World Cup: ಟೀಂ ಇಂಡಿಯಾ ಗೆಲುವಿಗಾಗಿ ವಿಶ್ವ ಪ್ರಸಿದ್ಧ ಸಿದ್ಧಿವಿನಾಯಕ ದೇಗುದಲ್ಲಿ ವಿಶೇಷ ಪೂಜೆ!
2007 T20 WC Final – 🇮🇳 won the toss and opted to bat first in 🇿🇦
2024 T20 WC Final – 🇮🇳 won the toss and opted to bat first vs 🇿🇦
👀#PlayBold #TeamIndia #T20WorldCup #SAvIND pic.twitter.com/5Sv1Wlbtqm
— Royal Challengers Bengaluru (@RCBTweets) June 29, 2024
ಈ ಎರಡೂ ತಂಡಗಳು ಕೂಡ ಸೋಲು ಕಾಣದೆ ಫೈನಲ್‌ಗೆ ಪ್ರವೇಶಿಸಿವೆ. ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠ ಲೈನ್ ಅಪ್ ಹೊಂದಿದೆ. ಈ ಹಿನ್ನೆಲೆಯಲ್ಲಿ ಈ ಮಹತ್ವದ ಕಾದಾಟ ಅತ್ಯಂತ ಕುತೂಹಲದಿಂದ ಕೂಡಿದೆ. ಈ ಎರಡೂ ತಂಡಗಳು ಕೂಡ ಸೋಲು ಕಾಣದೆ ನೇರವಾಗಿ ಫೈನಲ್‌ಗೆ ಲಗ್ಗೆ ಇಟ್ಟಿದೆ. 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಮುಡಿಗೇರಿಸಿಕೊಳ್ಳಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ.
ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿ.ಕೀ), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಲ್, ಸಂಜು ಸ್ಯಾಮ್ಸನ್, ಮೊಹಮ್ಮದ್ ಸಿರಾಜ್ , ಯಶಸ್ವಿ ಜೈಸ್ವಾಲ್
ದಕ್ಷಿಣ ಆಫ್ರಿಕಾ ತಂಡ
ಕ್ವಿಂಟನ್ ಡಿ ಕಾಕ್ (ಡಬ್ಲ್ಯೂ), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ಸಿ), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ
ಐರೆನ್ ಲೇಡಿ ಖುದ್ಸಿಯಾ ನಜಿರ್ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ