

ಪಲೆಕಲೆ: ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಕ್ರಿಕೆಟ್ ತಂಡವು ಆತಿಥೇಯ ಶ್ರೀಲಂಕಾ ತಂಡದ ವಿರುದ್ಧ ಮೂರು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಲಂಕಾ ವಿರುದ್ಧ 43 ರನ್ಗಳಿಂದ ಭಾರತ ಗೆಲುವು ಸಾಧಿಸಿದೆ.
ಭಾರತದ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ ತಂಡ 7ವಿಕೆಟ್ ಕಳೆದುಕೊಂಡು ಬರೋಬ್ಬರಿ 213 ರನ್ ಕಲೆಹಾಕಿತು.
ಈ ಕಠಿಣ ಗುರಿ ತಲುಪವಲ್ಲಿ ವಿಫಲವಾದ ಶ್ರೀಲಂಕಾ 19.2 ಓವರ್ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 170 ರನ್ ಗಳಿಸಿ ಸೋಲು ಒಪ್ಪಿಕೊಂಡಿತು. ಈ ಮೂಲಕ ಭಾರತ ಮೊದಲ ಪಂದ್ಯದಲ್ಲಿ 43 ರನ್ಗಳ ಗೆಲುವು ಸಾಧಿಸಿತು.