ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬುಡಪನಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಬೀರಪ್ಪ ನಾಗಪ್ಪ ಗೊರವರ (42) ಮೃತ ರೈತ.
ಇವರು ಬ್ಯಾಂಕ್ನಲ್ಲಿ 3 ಲಕ್ಷ ರೂ. ಬೆಳೆಸಾಲ ತೆಗೆದುಕೊಂಡು ಕೃಷಿ ಮಾಡಿಕೊಂಡಿದ್ದರು. ಆದರೆ, ಅತಿವೃಷ್ಟಿಯಿಂದ ಬೆಳೆಹಾನಿಯಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
