More

    ಸಾಲಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ

    ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗೊಂದಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
    ಪ್ರಭುಲಿಂಗಪ್ಪ ಹೊಳೆಯಪ್ಪ ಶಿವಣ್ಣನವರ (52) ಮೃತ ರೈತ.
    ಇವರು 4 ಲಕ್ಷ ರೂ. ಕೃಷಿ ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
    ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts