ರಟ್ಟಿಹಳ್ಳಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಡೂರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಬಸಪ್ಪ ಭರಮಪ್ಪ ದೋಣೆಪ್ಪನವರ (50) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 6.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
