ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

blank

ಹುಣಸೂರು: ಕನಿಷ್ಠ ಮೂಲಸೌಕರ್ಯಗಳನ್ನು ಕಲ್ಪಿಸುವುದು, ಅಂತರ ಜಿಲ್ಲಾ ವರ್ಗಾವಣೆ ಮತ್ತು ಪದೋನ್ನತಿಯನ್ನು ಮರುಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಸದಸ್ಯರು ಸೋಮವಾರ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.

blank

ನಗರದ ತಾಲೂಕು ಕಚೇರಿ ಮುಂಭಾಗ ಜಮಾವಣೆಗೊಂಡ ತಾಲೂಕಿನ 30 ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಆಗ್ರಹಿಸಿ ಕಪ್ಪುಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದರು.

ಈ ವೇಳೆ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ತೀರ್ಥಗಿರಿಗೌಡ, ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಕನಿಷ್ಠ ಸೌಲಭ್ಯಗಳೂ ಇಲ್ಲದೇ ದುಡಿಯುತ್ತಿದ್ದೇವೆ. ಕೆಲಸ ಮಾಡಲು ಅಗತ್ಯವಿರುವ ಕುರ್ಚಿ, ಟೇಬಲ್, ಸುಸಜ್ಜಿತ ಕಚೇರಿ, ಲ್ಯಾಪ್‌ಟಾಪ್, ಪ್ರಿಂಟರ್, ಸ್ಕ್ಯಾನರ್ ಇದ್ಯಾವುದೂ ಇಲ್ಲದೇ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ರಾಜ್ಯ ಸರ್ಕಾರ ವೆಬ್ ತಂತ್ರಾಂಶದ ಮೂಲಕ ಹಲವು ಸೇವೆಗಳನ್ನು ನೀಡುತ್ತಿದೆ. ಕಂದಾಯ ಇಲಾಖೆಯಲ್ಲಿ ಸಂಯೋಜನೆ, ಇ ಆಫೀಸ್, ಲ್ಯಾಂಡ್ ಬೀಟ್, ದಿಶಾಂಕ್, ನೀರಾವರಿ ಗಣತಿ, ಬೆಳೆ ಸಮೀಕ್ಷೆ ಸೇರಿದಂತೆ 21ಕ್ಕೂ ಹೆಚ್ಚು ಸೇವೆಗಳನ್ನು ನಮ್ಮ ಸ್ವಂತ ಮೊಬೈಲ್‌ನಲ್ಲೇ ಮಾಡಬೇಕಿದ್ದು, ಸರ್ಕಾರ ಮೊಬೈಲ್ ಒದಗಿಸದಿರುವ ಕಾರಣ ನಮ್ಮ ಸ್ವಂತ ಖರ್ಚಿನಲ್ಲಿ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಬೇಸರಿಸಿದರು.

ವರ್ಗಾವಣೆ ಇಲ್ಲ..ಭಡ್ತಿ ಭಾಗ್ಯ ಇಲ್ಲ: ಮೂರು ವರ್ಷಗಳ ಹಿಂದೆ ರಾಜ್ಯ ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳ ಅಂತರ ಜಿಲ್ಲಾ ವರ್ಗಾವಣೆ ಪದ್ಧತಿಯನ್ನ ರದ್ದುಪಡಿಸಿದೆ. ಇದರಿಂದಾಗಿ ನಮ್ಮ ಕುಟುಂಬದವರು, ವಯೋವೃದ್ಧ ತಂದೆ-ತಾಯಿಯರನ್ನೂ ನೋಡದ ಪರಿಸ್ಥಿತಿ ಎದುರಾಗಿದೆ. ನಾಲ್ಕು ವರ್ಷದಿಂದ ಭಡ್ತಿ ಇಲ್ಲ. ಕೆಲಸದ ಒತ್ತಡ ಹೆಚ್ಚಾದ ಕಾರಣ ನಮ್ಮ ಆರೋಗ್ಯವೂ ಕೈಕೊಡುತ್ತಿದೆ. 4 ತಿಂಗಳ ಹಿಂದೆ ಈ ಎಲ್ಲ ಸಮಸೆಗಳನ್ನು ಪರಿಹರಿಸಲು ಕೋರಿ ರಾಜ್ಯಾದ್ಯಂತ ಮುಷ್ಕರ ನಡೆಸಿದ ವೇಳೆ ರಾಜ್ಯ ಸರ್ಕಾರ ಎಲ್ಲವನ್ನು ಪರಿಹರಿಸುವುದಾಗಿ ಭರವಸೆ ನೀಡಿತ್ತು. ಆದರೆ ಈವೆರೆಗೆ ಸಮಸ್ಯೆ ಪರಿಹಾರ ಕಂಡಿಲ್ಲ. ಅಂದು ಮುಷ್ಕರದಲ್ಲಿ ಪಾಲ್ಗೊಂಡವರಿಗೆ ವಾರ್ಷಿಕ ವೇತನ ಭತ್ಯೆ ತಡೆಹಿಡಿದು ಭಯ ಹುಟ್ಟಿಸಲಾಗುತ್ತಿದೆ. ನಾವು ವೇತನ ಹೆಚ್ಚಳ ಕೇಳುತ್ತಿಲ್ಲ. ಬದಲಾಗಿ ಕನಿಷ್ಟ ಮೂಲಸೌಕರ್ಯಗಳನ್ನು ಕಲ್ಪಿಸಲು ಕೋರುತ್ತಿದ್ದೇವೆ. ಇದೀಗ ಕೇಂದ್ರ ಸಂಘದ ನಿರ್ಣಯದಂತೆ ರಾಜ್ಯಾದ್ಯಂತ ಅಧಿಕಾರಿಗಳು ಒಂದು ತಿಂಗಳ ಪರಿವರ್ತಿತ ರಜೆ ಹಾಕಿ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದೇವೆ. ಸರ್ಕಾರ ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷೆ ಚೈತ್ರಾ, ಶ್ರೀವರ್ಷ, ನಾಗರಾಜು, ಸುಬ್ರಮಣ್ಯ ಇತರರು ಹಾಜರಿದ್ದರು.

 

 

 

 

Share This Article
blank

ಸೇಬು ತಿಂದ ನಂತರ ಈ ಆಹಾರಗಳನ್ನು ಸೇವಿಸಬೇಡಿ..ಹಾಗೇನಾದರೂ ಮಾಡಿದರೆ ಅಪಾಯ ಖಂಡಿತ!Apple

Apple: ಸೇಬುಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಆದರೆ ಸೇಬನ್ನು ತಿಂದ ನಂತರ ಜೀರ್ಣಿಸಿಕೊಳ್ಳಲು 30 ರಿಂದ 40…

ಬಾಯಲ್ಲಿ ನೀರೂರಿಸುವ ಉಪ್ಪಿನಕಾಯಿ ತಿಂದರೆ ನಿಮ್ಮ ಆರೋಗ್ಯಕ್ಕೆ ಏನಾಗುತ್ತದೆ ಗೊತ್ತಾ? Pickles

Pickles: ಬಿಸಿ ಅನ್ನದ ಜೊತೆ ಸ್ವಲ್ಪ ಉಪ್ಪಿಕಾಯಿ ಇದ್ದರೆ ಸಾಕು ಆ ಊಟದ ರುಚಿಯೇ ಬೇರೆ.…

blank