ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ನಮೋ ಚಾಲನೆ

ಬೆಳಗಾವಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಕಿತ್ತೂರಿನಲ್ಲಿ ಮಾ. 12ರಂದು ಹಮ್ಮಿಕೊಂಡಿರುವ ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಡಿಸಿ ಎಂ.ಜಿ. ಹಿರೇಮಠ ಮಾಹಿತಿ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಮೃತ ಮಹೋತ್ಸವದ ವರ್ಷಾಚರಣೆ ಅಂಗವಾಗಿ ದೇಶದ 75 ಸ್ಥಳಗಳ ಪೈಕಿ ಕರ್ನಾಟಕದ 2 ಸ್ಥಳ ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಬೆಳಗಾವಿಯೂ ಒಂದಾಗಿದೆ ಎಂದರು.

ಸೈಕಲ್ ರಾಲಿ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಾಣಿ ಕಿತ್ತೂರು ಚನ್ನಮ್ಮಳ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಕಿತ್ತೂರು ಕೋಟೆಯ ಆವರಣದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಮಾರಂಭ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಆಯೋಜಿಸಿರುವ ಸೈಕಲ್ ರಾಲಿ ಕಿತ್ತೂರಿನಿಂದ ಬೆಳಗಾವಿ ಮಾರ್ಗವಾಗಿ ನಂದಗಡ ತಲುಪಲಿದೆ. 75ಸೈಕ್ಲಿಸ್ಟ್ ಗಳು ರಾಲಿಯಲ್ಲಿ ಭಾಗವಹಿಲಿದ್ದಾರೆ. ರಾಲಿಯಲ್ಲಿ ತೆರಳುವ ಸೈಕ್ಲಿಸ್ಟ್‌ಗಳು ಮಾರ್ಗಮಧ್ಯದಲ್ಲಿ ಇರುವಂತಹ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೂ ಭೇಟಿ ನೀಡಲಿದ್ದಾರೆ ಎಂದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್., ಡಿಸಿಪಿ ಚಂದ್ರಶೇಖರ ನೀಲಗಾರ, ಬೈಲಹೊಂಗಲ ಎಸಿ ಶಶಿಧರ ಬಗಲಿ, ಡಿಡಿಪಿಐ ಎ.ಬಿ. ಪುಂಡಲೀಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.

75 ವಾರಗಳ ಕಾಲ ವಿವಿಧ ಕಾರ್ಯಕ್ರಮ

ಮುಂದಿನ 75 ವಾರಗಳ ಕಾಲ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಕಂದಾಯ, ಹೋಬಳಿ ಕೇಂದ್ರಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮ, ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟ ಮೆಲಕು ಹಾಕುವ ಮತ್ತು ಸ್ವಾತಂತ್ರ್ಯದ ಮಹತ್ವ ಸಾರುವ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಮಾ. 12ರಂದು ಶಾಲಾ-ಕಾಲೇಜುಗಳಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ (ಆಜಾದಿ ಕಿ ಅಮೃತ್ ಮಹೋತ್ಸವ ಹಾಗೂ ಇಂಡಿಯಾ 75) ವಿಷಯ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗುವುದು. 75 ವಾರಗಳ ಕಾಲ ಛಾಯಾಚಿತ್ರ ಪ್ರದರ್ಶನ, ನಿಬಂಧ ಸ್ಪರ್ಧೆ, ಯೋಗ ಶಿಬಿರ, ಡಿಜಿಟಲ್ ಪ್ರದರ್ಶನ, ಪಾದಯಾತ್ರೆ ಮತ್ತಿತರ ಕಾರ್ಯಕ್ರಮಗಳನ್ನು ವಾರಕ್ಕೊಂದರಂತೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

Share This Article

Salt Water : ಪ್ರತಿದಿನ ಬೆಳಗ್ಗೆ ಉಗುರು ಬೆಚ್ಚನೆಯ ನೀರಿನಲ್ಲಿ ಉಪ್ಪು ಹಾಕಿ ಕುಡಿದರೆ ಏನಾಗುತ್ತೆ ಗೊತ್ತಾ?

ಬೆಂಗಳೂರು: ನಾವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದು ತುಂಬಾ…

World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ

ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…