ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನೂತನ ಲಾಂಛನ ಬಿಡುಗಡೆ

New Project (35)
Published on

ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕು ತಹಸೀಲ್ದಾರ್ ಶ್ರೀಧರ್ ಎಸ್.ಮುಂದಲಮನಿ ಧ್ವಜಾರೋಹಣಗೈದರು.

ಬಳಿಕ ಮಾತನಾಡಿ, ಬದುಕಿನಲ್ಲಿ ಅನಿರೀಕ್ಷಿತ ಘಟನೆಗಳು ಸಂಭವಿಸಿದಾಗ ಅದನ್ನು ಎದುರಿಸಿ ಈ ದೇಶದ ಘನತೆ ಗೌರವ ಕಾಪಾಡುವಲ್ಲಿ ನಾವು ಕಟಿಬದ್ಧರಾಗಬೇಕು ಎಂದರು.

ಎಕ್ಸಲೆಂಟ್ ಸಂಸ್ಥೆಯ ನೂತನ ಲಾಂಛನ ತಹಸೀಲ್ದಾರ್ ಬಿಡುಗಡೆಗೊಳಿಸಿದರು. ಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿ, ಪ್ರತಿಕೂಲತೆಗಳ ನಡುವೆ ದೃಢ ಚಿತ್ತದಿಂದ ಬದುಕಿ ಗೆದ್ದು ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂದರು.

ಸಂಸ್ಥೆ ಗೌರವಾಧ್ಯಕ್ಷ ಅಭಯಚಂದ್ರ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಎಕ್ಸಲೆಂಟ್ ಪಪೂ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯಶಿಕ್ಷಕ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು.

ಉಪನ್ಯಾಸಕಿ ಪ್ರಿಯಾಂಕಾ ಸ್ವಾಗತಿಸಿ. ಡಾ.ಶ್ರುತಿ ಅತಿಥಿಗಳನ್ನು ಪರಿಚಯಿಸಿದರು. ಪ್ರಮೀಳಾ ಪಿಂಟೊ ವಂದಿಸಿ, ಸಹ ಮುಖ್ಯಶಿಕ್ಷಕ ಜಯಶೀಲಾ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net