ಹೋರಾಟಗಾರರ ಆಶಯ ಈಡೇರಿಸಲು ಶ್ರಮ : ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ.ಎನ್.ಆಳ್ವ ಹೇಳಿಕೆ

New Project (43)
Published on

ಉಳ್ಳಾಲ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ನೆನಪಿಟ್ಟುಕೊಂಡು ಅವರ ಆಶಯಗಳನ್ನು ಈಡೇರಿಸಲು ಶ್ರಮಿಸಬೇಕು ಎಂದು ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ.ಎನ್.ಆಳ್ವ ಹೇಳಿದರು.

ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಮತ್ತು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಶಾಲಾ ಸಂಚಾಲಕ ಕಡೆಂಜ ಸೋಮಶೇಖರ್ ಚೌಟ ಅಧ್ಯಕ್ಷತೆ ವಹಿಸಿದ್ದರು. ಶಾಲಾಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ರಾಜಕುಮಾರ್ ಶೆಟ್ಟಿ ಮಂಚವುದಡಿ, ಆಂಗ್ಲಮಾಧ್ಯಮ ಶಾಲೆ ಸಂಚಾಲಕ ದುರ್ಗಾಪ್ರಸಾದ್ ರೈ ಕಲ್ಲಾಯಿ, ಸಮಾಜ ಸೇವಕ ನರಸಿಂಹ ನಾಯ್ಕ ಪಂಜಿಲಗುರಿ ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ರಾಧಾಕೃಷ್ಣ ರೈ, ರಾಮಕೃಷ್ಣ ಪ್ರೌಢಶಾಲೆ ಮುಖ್ಯಶಿಕ್ಷಕಿ ಮೋಹಿನಿ ಸ್ವಾಗತಿಸಿದರು. ಶಿಕ್ಷಕ ಶಿವಕುಮಾರ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ತ್ಯಾಗಮ್ ಹರೇಕಳ ಮತ್ತು ಶಿಕ್ಷಕ ರವಿಶಂಕರ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net