ಏಳಿಗೆಯಲ್ಲಿ ಯುವಜನಾಂಗದ್ದೇ ಜವಾಬ್ದಾರಿ : ಸರ್ಕಲ್ ಇನ್‌ಸ್ಪೆಕ್ಟರ್ ರವಿ ಅಭಿಪ್ರಾಯ

New Project (9)
Published on

ಉಪ್ಪಿನಂಗಡಿ: ದೇಶವು ಆರ್ಥಿಕವಾಗಿ ಅಭಿವೃದ್ಧಿಯಾಗಲು ಯುವಜನಾಂಗದ ಪಾತ್ರ ಬಹಳ ಅಗತ್ಯ ಎಂದು ಉಪ್ಪಿನಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ರವಿ ಬಿ.ಎಸ್ ಹೇಳಿದರು.

ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಧ್ವಜಾರೋಹಣಗೈದು ಮಾತನಾಡಿದರು. ಶಿಕ್ಷಕಿ ಅನಿತಾ ಸೀಕ್ವೇರಾ ಶುಭಹಾರೈಸಿದರು. ವಿದ್ಯಾರ್ಥಿ ಹಷಿಕೇಶ್ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಸ್ಮರಿಸಿದರು. ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಕರುಣಾಕರ ಸುವರ್ಣ, ಸಂಚಾಲಕ ಸುಬ್ರಹ್ಮಣ್ಯ ಭಟ್, ಆಡಳಿತ ಮಂಡಳಿ ಸದಸ್ಯರು, ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ಕೆ. ಪ್ರಕಾಶ್, ಮುಖ್ಯ ಶಿಕ್ಷಕಿ ವೀಣಾ ಆರ್.ಪ್ರಸಾದ್, ಉಪನ್ಯಾಸಕರು, ಪಾಲಕರು ಉಪಸ್ಥಿತರಿದ್ದರು. ಧೃನಿತಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net