More

    ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಿದ್ಧತೆ: ಡಿಸಿ ಎಸ್‌.ಅಶ್ವಥಿ ಮಾಹಿತಿ

    ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಆ.15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್‌.ಅಶ್ವಥಿ ಅಧಿಕಾರಿಗಳಿಗೆ ತಿಳಿಸಿದರು.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪೊಲೀಸ್‌ ಇಲಾಖೆ, ಗೃಹ ರಕ್ಷಕ ದಳ, ಎನ್‌.ಸಿ.ಸಿ, ಹೋಂ ಗಾರ್ಡ್ ತಂಡದಿಂದ ಆಕರ್ಷಕ ಕವಾಯತು ಆಯೋಜಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಮಕ್ಕಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಕ್ಕಳಿಂದ ದೇಶ ಭಕ್ತಿ ಗೀತೆ ಹಾಗೂ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸುವುದು. ಇದಕ್ಕಾಗಿ ಉತ್ತಮ ತಂಡಗಳನ್ನು ಆಯ್ಕೆಮಾಡಿ ತರಬೇತಿ ನೀಡುವಂತೆ ತಿಳಿಸಿದರು.

    ಕಾರ್ಯಕ್ರಮವು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದ ಉಪಸಮಿತಿಯನ್ನು ರಚಿಸಿ ಜವಾಬ್ದಾರಿಗಳನ್ನು ವಹಿಸಿದರು. ಕಾರ್ಯಕ್ರಮದ ಸ್ಥಳದಲ್ಲಿ ಸ್ವಚ್ಛತೆ, ವೇದಿಕೆ ನಿರ್ಮಾಣ, ಆಸನಗಳ ವ್ಯವಸ್ಥೆ, ಅಲಂಕಾರ, ಕುಡಿಯುವ ನೀರು, ಸಿಹಿ ಹಂಚಿಕೆ ಸೇರಿದಂತೆ ವಿವಿಧ ವ್ಯವಸ್ಥೆಗಳು ಆಚುಕಟ್ಟಾಗಿ ನಡೆಯುವಂತೆ ಸೂಚನೆ ನೀಡಿದರು. ಜಿಲ್ಲಾ ಮಟ್ಟದ ಇಲಾಖೆ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ ಆಗಸ್ಟ್ 15 ರಂದು ಧ್ವಜಾರೋಹಣ ನೆರವೇರಿಸಿ ತಮ್ಮ ಸಿಬ್ಬಂದಿಗಳೊಂದಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಧ್ವಜಾರೋಹಣ ಕಾರ್ಯ ಕ್ರಮಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿದರು.

    ಸಭೆಯಲ್ಲಿ ಜಿ.ಪಂ.ಸಿಇಒ ಶಾಂತಾ ಎಂ.ಹುಲ್ಮನಿ,ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜ,ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಕುಂಇ ಅಹಮದ್,
    ಜಿ.ಪಂ.ಉಪಕಾರ್ಯದರ್ಶಿ ಸರಸ್ವತಿ, ಕಚೇರಿ ಹಿರಿಯ ಸಹಾಯಕ ಸ್ವಾಮಿಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ರಂಗೇಗೌಡ, ಹಿಂದುಳಿದ ವರ್ಗದ ಕಲ್ಯಾಣಾಧಿಕಾರಿ ಶ್ರೀನಿವಾಸ್, ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts