ವಿದ್ಯಾರ್ಥಿಗಳಲ್ಲಿ ದೇಶ ಸೇವೆಗೈಯುವ ಸಂಕಲ್ಪ: ದೇವಿ ಕುಮಾರ್ ಕೆ.ಬಿ.ಮಚ್ಚಾರು ಹೇಳಿಕೆ

New Project (11)
Published on

ಕಟೀಲು: ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಮುಗಿಸಿ ಸೇನೆಗೆ ಸೇರಿ ದೇಶ ಸೇವೆ ಮಾಡುವ ಸಂಕಲ್ಪ ಮಾಡಬೇಕು, ನಮ್ಮ ದೇಶಕ್ಕೆ ಸ್ವಾತಂತ್ರೃ ತಂದು ಕೊಡಲು ಹೋರಾಡಿದ ಹೋರಾಟಗಾರರನ್ನು ಸದಾ ನೆನಪಿಸಿಕೊಳ್ಳುವುದಲ್ಲದೆ, ಭಾರತಕ್ಕೆ ನಮ್ಮಿಂದಾದ ಕೊಡುಗೆ ನೀಡಬೇಕು ಎಂದು ಭಾರತೀಯ ವಾಯು ಸೇನೆ ನಿವೃತ್ತ ಅಧಿಕಾರಿ ದೇವಿ ಕುಮಾರ್ ಕೆ.ಬಿ.ಮಚ್ಚಾರು ಹೇಳಿದರು.

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಸಮೂಹ ಶಿಕ್ಷಣ ಸಂಸ್ಥೆಗಳ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕಟೀಲು ರಥಬೀದಿಯಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಗೈದು ಮಾತನಾಡಿದರು.

ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ, ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತ ಆಸ್ರಣ್ಣ, ಪ್ರಸಾದ ಆಸ್ರಣ್ಣ, ಶ್ರೀಹರಿನಾರಾಯಣದಾಸ ಆಸ್ರಣ್ಣ, ಬಿಪಿನ್‌ಚಂದ್ರ ಶೆಟ್ಟಿ, ಪ್ರವೀಣ್‌ದಾಸ ಭಂಡಾರಿ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಡಾ.ವಿಜಯ್ ವಿ., ಕುಸುಮಾವತಿ, ರಾಜಶೇಖರ್, ಗಿರೀಶ ತಂತ್ರಿ, ಚಂದ್ರಶೇಖರ ಭಟ್, ಸರೋಜಿನಿ ಮತ್ತಿತರರಿದ್ದರು. ಪ್ರದೀಪ್ ಹಾವಂಜೆ, ಪುಂಡಲೀಕ ಕೊಠಾರಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net