ನಾನು ನಿಮ್ಮ ದಬ್ಬಾಳಿಕೆಗಳಿಗೆ, ಬೆದರಿಕೆಗಳಿಗೆ ಬಗ್ಗುವುದಿಲ್ಲ: ಸುಮಲತಾ ಅಂಬರೀಷ್​

ಬೆಂಗಳೂರು/ಮಂಡ್ಯ: ಪ್ರತಿಷ್ಠೆಯ ಕಣವಾಗಿರುವ ಮಂಡ್ಯ ಲೋಕಸಭಾ ಚುನಾವಣಾ ಅಖಾಡ ಪರಸ್ಪರ ವಾಕ್ಸಮರಕ್ಕೆ ವೇದಿಕೆಯಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ರಣರಂಗವನ್ನು ಪ್ರವೇಶಿಸಿರುವ ನಟಿ ಸುಮಲತಾ ಅಂಬರೀಷ್​ ಅವರು ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್​ ನೀಡಿದ್ದಾರೆ.

ಸೋಮವಾರ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ನಂತರ ನಡೆದ ಮೈತ್ರಿ ಸರ್ಕಾರದ ಬೃಹತ್​ ಸಮಾವೇಶದಲ್ಲಿ ಸಿಎಂ ಕುಮಾರಸ್ವಾಮಿ ಅವರು ನಟಿ ಸುಮಲತಾ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ತಮ್ಮ ಫೇಸ್​ಬುಕ್​ ಖಾತೆಯ ಮೂಲಕ ನಿಮ್ಮ ದಬ್ಬಾಳಿಕೆಗೆಲ್ಲ ನಾವು ಬಗ್ಗುವುದಿಲ್ಲ ಎಂದು ಪರೋಕ್ಷವಾಗಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಸುಮಲತಾ ಫೇಸ್​ಬುಕ್​ ಪೋಸ್ಟ್​ ಹೀಗಿದೆ…
ನಾನು ಸೌಮ್ಯವಾಗಿ, ಪ್ರೀತಿಯಿಂದ ಭಾರತೀಯ ಪ್ರಜಾಪ್ರಭುತ್ವದ ಘನತೆಯನ್ನು, ಗಾಂಭೀರ್ಯವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇನೆ. ನಾನು ದಬ್ಬಾಳಿಕೆಗಳಿಗೆ ಹಾಗೂ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ, ಅತ್ಯಂತ ಉದಾತ್ತವಾದ ಆದರ್ಶಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುವ ಮನಸ್ಥಿತಿಯಿಂದ ಚುನಾವಣಾ ಕಣದಲ್ಲಿದ್ದೇನೆ. ಮಂಡ್ಯದ ನನ್ನ ಪ್ರೀತಿಯ ಜನರು ಇದನ್ನು ಸ್ವೀಕರಿಸುತ್ತಾರೆ ಎಂದು ನನ್ನ ಬಲವಾದ ನಂಬಿಕೆ ಇದೆ ಎಂದು ಹೇಳುವ ಮೂಲಕ ಎದುರಾಳಿಗಳಿಗೆ ಸಂದೇಶ ರವಾನಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *