ಕಾಂಗ್ರೆಸ್​ಗೆ ಬೆಂಬಲ ನೀಡಿದ ಮಹಾರಾಷ್ಟ್ರದ ಪಕ್ಷೇತರ ಸಂಸದ ವಿಶಾಲ್!

kharge
Published on

ನವದೆಹಲಿ: ಮಹಾರಾಷ್ಟ್ರದ ಪಕ್ಷೇತರ ಲೋಕಸಭಾ ಸದಸ್ಯ ವಿಶಾಲ್ ಪಾಟೀಲ್ ಅವರು ಕಾಂಗ್ರೆಸ್​ಗೆ ಬೆಂಬಲ ವ್ಯಕ್ತಪಡಿಸಿದರು. ಗುರುವಾರ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಸಂತದಾದಾ ಪಾಟೀಲ್ ಅವರ ಮೊಮ್ಮಗ ಪಾಟೀಲ್ ಅವರು ಸಾಂಗ್ಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ. ಸಾಂಗ್ಲಿ ಸಂಸದೀಯ ಸ್ಥಾನವನ್ನು ಶಿವಸೇನೆ-ಯುಬಿಟಿಗೆ ಹಂಚಿಕೆ ಮಾಡಿದ ನಂತರ ಮಾಜಿ ಕಾಂಗ್ರೆಸ್ ನಾಯಕ, ಪಾಟೀಲ್ ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಸಾಂಗ್ಲಿಯಿಂದ ಚುನಾಯಿತ ಸಂಸದರಾದ ವಿಶಾಲ್ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಬೆಂಬಲವನ್ನು ಸ್ವಾಗತಿಸುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದುಕೊಂಡಿದೆ. 293 ಸ್ಥಾನಗಳಲ್ಲಿ ಗೆಲವು ಸಾಧಿಸಿರುವ ಬಿಜೆಪಿ ನೇತೃತ್ವದ ಎನ್​ಡಿಯ ಮೈತ್ರಿಕೂಟ ಜೂನ್ 09 ರಂದು ಸರ್ಕಾರ ರಚನೆ ಮಾಡಲಿದೆ. ಮೂರನೇ ಬಾರಿಗೆ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net