More

    ಸರ್ಕಾರದ ವಿರುದ್ಧ ಕಪ್ಪು ಬಾವುಟ ಪ್ರದರ್ಶನ

    ವಿಜಯಪುರ: ತಳವಾರ ಮತ್ತು ಪರಿವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣ ಪತ್ರ ನೀಡಲು ಕೇಂದ್ರ ಸರ್ಕಾರ ಗೆಜೆಟ್ ಹೊರಡಿಸಿದ್ದರೂ ಅನವಶ್ಯಕವಾಗಿ ಗೊಂದಲ ಸೃಷ್ಟಿಸಿ ಪ್ರಮಾಣ ಪತ್ರ ತಡೆ ಹಿಡಿದಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಸಮುದಾಯದವರು ಪ್ರತೀ ಮನೆ ಮೇಲೆ ಕಪ್ಪು ಬಾವುಟ ಹಾರಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.

    ಸೋಮವಾರ ಜಿಲ್ಲಾದ್ಯಂತ ತಳವಾರ ಮತ್ತು ಪರಿವಾರ ಸಮುದಾಯದವರ ಮನೆ ಮೇಲೆ ಕಪ್ಪು ಬಾವುಟ ಹಾರಾಡಿತು. ಹೋರಾಟಕ್ಕೆ ಕರೆ ನೀಡಿರುವ ಮಾಜಿ ಶಾಸಕ ಶರಣಪ್ಪ ಸುಣಗಾರ ಅವರು ಮಾತನಾಡಿ, ಈಗಾಗಲೇ ಕೇಂದ್ರ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನದ ಪ್ರಕಾರ ತಳವಾರ ಮತ್ತು ಪರಿವಾರ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆ ಮಾಡಿ ರಾಜ್ಯ ಪತ್ರ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ಸಮುದಾಯದ ಮಕ್ಕಳು ಸರ್ಕಾರಿ ಸೌಲಭ್ಯಗಳಿಂದ ವಂಚಿತಗೊಳ್ಳುತ್ತಿದ್ದಾರೆ. ನೇಮಕಾತಿಯಿಂದ ದೂರ ಉಳಿಯುತ್ತಿದ್ದಾರೆ. ಬರುವ ಗ್ರಾಪಂ ಚುನಾವಣೆಯಿಂದಲೂ ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ಕೂಡಲೇ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಒತ್ತಾಯಿಸದರು.

    ಈಗಾಗಲೇ ರಾಜ್ಯಾದ್ಯಂತ ದಿನಕ್ಕೊಂದು ಹೋರಾಟ ರೂಪಿಸಲಾಗುತ್ತಿದೆ. ಕಲಬುರಗಿಯಲ್ಲಿ ಧರಣಿ ಆರಂಭಗೊಂಡರೆ ಯಾದಗಿರಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ. ಜಿಲ್ಲೆಯಲ್ಲಿ ಮೂರು ಹಂತದ ಹೋರಾಟ ಮುಕ್ತಾಯಗೊಂಡಿದ್ದು ಮತ್ತೊಂದು ಸುತ್ತಿನ ಬೃಹತ್ ಹೋರಾಟ ರೂಪಿಸಲಾಗುತ್ತಿದೆ. ಅದಕ್ಕೂ ಮುನ್ನ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿ ಪ್ರತೀ ಮನೆ ಮೇಲೆ ಕಪ್ಪು ಬಾವುಟ ಪ್ರದರ್ಶಿಸಲಾಗುತ್ತಿದೆ ಎಂದರು.

    ಧರಣಿ ಸತ್ಯಾಗ್ರಹ

    ರಾಜ್ಯ ಸರ್ಕಾರ ತಳವಾರ ಮತ್ತು ಪರಿವಾರ ಸಮುದಾಯದ ಹಕ್ಕನ್ನು ಕಿತ್ತುಕೊಳ್ಳುತ್ತಿದೆ. ಹೋರಾಟಕ್ಕೂ ಅವಕಾಶ ನೀಡದೇ ಸರ್ವಾಧಿಕಾರಿ ಧೋರಣೆ ತಾಳುತ್ತಿದೆ. ಅಧಿವೇಶನ ವೇಳೆ ಶಾಂತಿಯುತ ಹೋರಾಟಕ್ಕೆ ಅನುಮತಿ ಕೇಳಲಾಗಿ ಅಧಿಕಾರಿಗಳು ನಿರಾಕರಿಸುವ ಮೂಲಕ ಸಮುದಾಯದ ಹೋರಾಟದ ಹಕ್ಕನ್ನು ಕಿತ್ತುಕೊಂಡಿದೆ. ಇದೀಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಕೂಡ ಶಾಂತಿಯುತವಾಗಿ ಧರಣಿ ಹಮ್ಮಿಕೊಳ್ಳಲು ಸಹ ಅನುಮತಿ ನೀಡುತ್ತಿಲ್ಲ. ಇದೆಲ್ಲಾ ಗಮನಿಸಿದರೆ ನಾವು ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿದ್ದೇವಾ? ಅಥವಾ ಸರ್ವಾಧಿಕಾರಿ ವ್ಯವಸ್ಥೆಯಲ್ಲಿ ಇದ್ದೇವಾ? ಎಂಬ ಅನುಮಾನ ಕಾಡುತ್ತಿದೆ ಎಂದರು.

    ಸಂವಿಧಾನಾತ್ಮಕವಾಗಿ ಹೋರಾಟಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅನುಮತಿ ಈಗಾಗಲೇ ಕೇಳಲಾಗಿದೆ. ಹಾಗೊಂದು ವೇಳೆ ಅನುಮತಿ ನೀಡದೇ ಹೋದರೆ ಉಗ್ರ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ. ಈ ಕೂಡಲೇ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅನುಮತಿ ನೀಡಬೇಕು. ಇಲ್ಲವಾದಲ್ಲಿ ಮುಂದೆ ಆಗಬಹುದಾದ ಅನಾಹುತಗಳಿಗೆ ಹೊಣೆ ಹೊರಬೇಕಾಗುತ್ತದೆ ಎಂದು ಶರಣಪ್ಪ ಸುಣಗಾರ ಎಚ್ಚರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts