ಇಂಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸಹಯೋಗದಲ್ಲಿ ನ.26ರಂದು ’ಕುವೆಂಪು ಓದು-ಕಮ್ಮಟ’ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆಗೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಚನ್ನಪ್ಪ ಕಟ್ಟಿ ಕಮ್ಮಟ ಉದ್ಘಾಟಿಸುವರು.
ಪ್ರಾಚಾರ್ಯ ಪ್ರೊ.ರಮೇಶ ಆರ್.ಎಚ್. ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ವಿವಿ ಸಿಂಡಿಕೇಟ್ ಸದಸ್ಯ ಪ್ರೊ.ಎಸ್.ಜೆ.ಮಾಡ್ಯಾಳ, ಪ್ರಾಧಿಕಾರದ ಸದಸ್ಯ ಜೆ.ಕರಿಯಪ್ಪ ಮಾಳಿಗೆ ಉಪಸ್ಥಿತರಿರುವರು.
ಮೊದಲ ಗೋಷ್ಠಿಯಲ್ಲಿ ಕುವೆಂಪು ಅವರ ನಾಟಕಗಳ ಕುರಿತು ಸಂಶೋಧಕ ಡಾ.ಎಸ್.ಕೆ.ಕೊಪ್ಪಾ ಉಪನ್ಯಾಸ ನೀಡುವರು.
2ನೇ ಗೋಷ್ಠಿ ಮಧ್ಯಾಹ್ನ 2ಗಂಟೆಗೆ ನಡೆಯಲಿದ್ದು ಕುವೆಂಪು ಅವರ ವೈಚಾರಿಕ ಬರಹಗಳ ಕುರಿತು ಶಹಾಪುರದ ವಿಮರ್ಶಕ ಸಿ.ಎಸ್.ಭೀಮರಾಯ ಉಪನ್ಯಾಸ ನೀಡುವರು.
ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕಾಲೇಜಿನ ಪ್ರಾಚಾರ್ಯ ಪ್ರೊ.ರಮೇಶ ಆರ್.ಎಚ್ ಅಧ್ಯಕ್ಷತೆ ವಹಿಸುವರು. ತಾಲ್ಲೂಕು ಕಸಾಪ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಸಮಾರೋಪ ಭಾಷಣ ಮಾಡುವರು ಎಂದು ಕುವೆಂಪು ಓದು ಕಾರ್ಯಕ್ರಮದ ಸಂಯೋಜಕ ಡಾ.ರಮೇಶ ಎಸ್. ಕತ್ತಿ ತಿಳಿಸಿದ್ದಾರೆ.